HomeLatest NewsBIG NEWS: ರಾಜ್ಯಾದ್ಯಂತ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ವಿಶೇಷ ಕಾರ್ಯಾಚರಣೆ

BIG NEWS: ರಾಜ್ಯಾದ್ಯಂತ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ವಿಶೇಷ ಕಾರ್ಯಾಚರಣೆ

ಬೆಂಗಳೂರು: ಬಾಂಗ್ಲಾದೇಶಿಯರು ಸೇರಿದಂತೆ ರಾಜ್ಯದಲ್ಲಿ ಅನಧಿಕೃತವಾಗಿ ನೆಲೆಸಿರುವ ವಿದೇಶಿಯರ ಪತ್ತೆಗೆ ರಾಜ್ಯಾದ್ಯಂತ ವಿಶೇಷ ಕಾರ್ಯಾಚರಣೆ ನಡೆಸುವಂತೆ ಪೊಲೀಸರಿಗೆ ಆದೇಶಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿಯರು ಸೇರಿದಂತೆ ವಿದೇಶಿಗರ ಬಗ್ಗೆ ಒಬ್ಬೊಬ್ಬರು ಒಂದೊಂದು ಸಂಖ್ಯೆ ಹೇಳುತ್ತಿದ್ದಾರೆ. ಅಕ್ರಮವಾಗಿ ನೆಲೆಸಿರುವ ವಿದೇಶಿಗಳ ಪತ್ತೆಗೆ ಪೊಲೀಸರಿಗೆ ಸೂಚನೆ ನೀಡಲಾಗಿದ್ದು, ರಾಜ್ಯದಿಂದ ವಿಶೇಷ ಕಾರ್ಯಾಚರಣೆ ನಡೆಸಿ ಅವರನ್ನು ಪತ್ತೆ ಮಾಡಿ ಪತ್ತೆ ಆಗುವ ಅಕ್ರಮ ಬಾಂಗ್ಲಾದೇಶ ಸೇರಿ ಎಲ್ಲ ವಿದೇಶಿಯರನ್ನ ಅವರ ದೇಶಕ್ಕೆ ವಾಪಸ್ ಕಳುಹಿಸಲಾಗುವುದು ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular