HomeKarnatakaBIG NEWS: ಏ. 5ರಿಂದ ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಮೌಲ್ಯಮಾಪನ ಆರಂಭ

BIG NEWS: ಏ. 5ರಿಂದ ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಮೌಲ್ಯಮಾಪನ ಆರಂಭ

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ರಾಜ್ಯಾದ್ಯಂತ ಏಪ್ರಿಲ್ 5ರಿಂದ ಆರಂಭವಾಗಲಿದೆ.

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕರ್ತವ್ಯ ಮತ್ತು ಮಾರ್ಗಸೂಚಿ ಬಗ್ಗೆ ಶಿಕ್ಷಣ ಇಲಾಖೆ ಜಿಲ್ಲಾ ಉಪ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. ಏಪ್ರಿಲ್ 2ರಂದು ಪರೀಕ್ಷೆಗಳು ಮುಕ್ತಾಯವಾಗಲಿದ್ದು, ಏಪ್ರಿಲ್ 3ರಂದು ಬೆಳಗ್ಗೆ 9 ಗಂಟೆಗೆ ಮೌಲ್ಯಮಾಪನ ಕೇಂದ್ರಕ್ಕೆ ವ್ಯವಸ್ಥಾಪಕರು ಹಾಜರಾಗಬೇಕು. ಏಪ್ರಿಲ್ 4ರಂದು ಬೆಳಿಗ್ಗೆ 10.30 ಕ್ಕೆ ಜಂಟಿ ಮುಖ್ಯ ಮೌಲ್ಯಮಾಪಕರು ವಿಡಿಯೋ ಸಂವಾದದಲ್ಲಿ ಪಾಲ್ಗೊಳ್ಳುವಂತೆ ಸೂಚಿಸಲಾಗಿದೆ.

ಏ. 5ರಿಂದ ಮೌಲ್ಯ ಮಾಪನ ಕೇಂದ್ರಗಳಿಗೆ ಉಪ ಮುಖ್ಯ ಮೌಲ್ಯಮಾಪಕರು ಹಾಜರಾಗಿ ಉತ್ತರ ಪತ್ರಿಕೆಗಳ ಕೋಡಿಂಗ್, ಡಿಕೋಡಿಂಗ್ ಆರಂಭಿಸಬೇಕು. ಏ. 6ರಿಂದ ಸಹಾಯಕ ಮೌಲ್ಯಮಾಪಕರು ಹಾಜರಾಗಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಆರಂಭಿಸಬೇಕು ಎಂದು ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೌಲ್ಯಮಾಪನದ ದಿನಗಳಲ್ಲಿ ಕೇಂದ್ರದ ಸುತ್ತಲ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲು ಜಿಲ್ಲಾಧಿಕಾರಿ ಅಥವಾ ತಹಶೀಲ್ದಾರರಿಗೆ ಪತ್ರ ಬರೆದು ಕ್ರಮ ವಹಿಸಬೇಕು. ಮೌಲ್ಯಮಾಪನ ಕೇಂದ್ರಗಳಿಗೆ ಸಂಘಟನೆಗಳ ಸದಸ್ಯರು, ರಾಜಕೀಯ ಪಕ್ಷದವರು, ಟಿವಿ ಹಾಗೂ ಪತ್ರಿಕಾ ಮಾಧ್ಯಮದವರು ಅಥವಾ ಇನ್ಯಾವುದೇ ಅನ್ಯ ವ್ಯಕ್ತಿಗಳು ಪ್ರವೇಶಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲು ಡಿಡಿಪಿಐ ಮತ್ತು ಬಿಇಒಗಳು ಕ್ರಮವಹಿಸಬೇಕು.

ಕೇಂದ್ರಗಳಿಗೆ ಲೇಖಕರು, ಪ್ರಕಾಶಕರು ಪುಸ್ತಕ ಮಾರಾಟದ ಸಲುವಾಗಿ ಬರುವುದನ್ನು ನಿಷೇಧಿಸಬೇಕು. ಮೌಲ್ಯಮಾಪಕರಿಗೆ ಕಾಫಿ, ಟೀ, ತಿಂಡಿ, ಊಟವನ್ನು ಪ್ರಾಯೋಜಕರಿಂದ ಪಡೆಯುವುದನ್ನು ನಿಷೇಧಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular