BIG NEWS : ʻSCʼ ಒಳ ಮೀಸಲಾತಿ ಕುರಿತು ʻರಾಜ್ಯ ಸಚಿವ ಸಂಪುಟ ಸಭೆʼಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು : ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಕುರಿತು ಸಂವಿಧಾನದ ಅನುಚ್ಛೇದ 341ಕ್ಕೆ ಹೊಸದಾಗಿ ಖಂಡ (3) ಅನ್ನು ಸೇರಿಸುವ ಕುರಿತಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ವಿವಿಧ ಸಮುದಾಯಗಳಿಗೆ ಒಳ ಮೀಸಲಾತಿ ಕಲ್ಪಿಸಲು ಸಂವಿಧಾನದ 341ನೇ ಅನುಚ್ಚೇದಕ್ಕೆ ಹೊಸದಾಗಿ 3 ನೇ ಖಂಡ ಸೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದ್ದು, ಈ ಮೂಲಕ ಒಳ ಮೀಸಲಾತಿ ಜಾರಿಯ ವಿಷಯವನ್ನು ಕೇಂದ್ರ ಸರ್ಕಾರದ ಅಂಗಳಕ್ಕೆ ದೂಡಿದೆ.

341 (1) ನೇ ಖಂಡದ ಅಧಿಸೂಚನೆ ಅಥವಾ  341 (೨) ನೇ ಖಂಡದ ಪ್ರಕಾರ ಸಂಸತ್ತು ಜಾತಿ, ಜನಾಂಗ ಅಥವಾ ಬುಡಕಟ್ಟು ಅಥವಾ ಜನರ ಗುಂಪುಗಳ ಪಟ್ಟಿಯನ್ನು ರೂಪಿಸುತ್ತದೆ. ಇದಕ್ಕೆ ಸಂಬಂಧಿಸಿದಂತೆ ರಾಜ್ಯ/ಕೇಂದ್ರಾಡಳಿತ ಪ್ರದೇಶಗಳು ನೀಡಿದ ಶಿಫಾರಸಿನ ಆಧಾರದಲ್ಲಿ ಕೇಂದ್ರ ಸರ್ಕಾರವು ಉಪ ವರ್ಗೀಕರಣವನ್ನು ಮಾಡಬಹುದು ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read