HomeKarnatakaBIG NEWS : 'ರಾಜ್ಯ ಸರ್ಕಾರಿ' ನೌಕರರೇ ಗಮನಿಸಿ : 'ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ' ಪಾಸ್...

BIG NEWS : ‘ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ : ‘ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ’ ಪಾಸ್ ಮಾಡದಿದ್ರೆ ಸಿಗಲ್ಲ ಬಡ್ತಿ.!

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯವಾಗಿದ್ದು, ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಅವಧಿಯನ್ನು ದಿನಾಂಕ 31:12 : 2025 ರವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಸಾಕ್ಷರತಾ ಪರೀಕ್ಷೆಯನ್ನು ಪಾಸ್ ಮಾಡದೇ ಇರುವ ನೌಕರರಿಗೆ ಬಡ್ತಿ ಸಿಗೋದು ಅನುಮಾನ ಎನ್ನಲಾಗಿದೆ.

ಹೌದು. ಈ ಪರೀಕ್ಷೆಯು ಸರ್ಕಾರಿ ನೌಕರರ ಪರಿವೀಕ್ಷಣಾ ಅವಧಿ,ಮುಂಬಡ್ತಿ ಹಾಗೂ ವಾರ್ಷಿಕ ವೇತನ ಬಡ್ತಿಗೆ ಒಂದು ಅರ್ಹತಾ ಮಾನದಂಡವಾಗಿರುತ್ತದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಅವಧಿ 31-12-24 ರವರೆಗೆ ಅವಕಾಶ ನೀಡಲಾಗಿತ್ತು. ಇದೀಗ ಪರೀಕ್ಷೆ ಪಾಸ್ ಮಾಡಲು ಡಿಸೆಂಬರ್ 31 2025 ರವರೆಗೆ ವಿಸ್ತರಿಸಲಾಗಿದೆ. ಈ ಅವಧಿಯೊಳಗೆ ಕಂಪ್ಯೂಟರ್ ಪರೀಕ್ಷೆಯಲ್ಲಿ ಉತ್ತೀರ್ಣರಾಗದೇ ಇದ್ದಲ್ಲಿ ವಾರ್ಷಿಕ ಬಡ್ತಿಯಲ್ಲಿ ಅರ್ಹನಾಗತಕ್ಕದ್ದಲ್ಲ ಎಂದು ನಿಯಮಗಳಲ್ಲಿ ಸ್ಪಷ್ಟಪಡಿಸಲಾಗಿದೆ.

ಕರ್ನಾಟಕ ರಾಜ್ಯ ನಾಗರಿಕ ಸೇವಾ ಅಧಿನಿಯಮ, 1978 (1990 ರ ಕರ್ನಾಟಕ ಅಧಿನಿಯಮ (14) 8ನೇ ಪ್ರಕರಣದೊಂದಿಗೆ ಓದಲಾದಂತೆ, 3ನೇ ಪ್ರಕರಣದ (1)ನೇ ಉಪ-ಪ್ರಕರಣದ ಮೂಲಕ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ರಚಿಸಿರುವ ಕರ್ನಾಟಕ ನಾಗರಿಕ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2012ಕ್ಕೆ ತಿದ್ದುಪಡಿ ಮಾಡುವ ಸಲುವಾಗಿ ಈ ಕೆಳಗಿನ ನಿಯಮಗಳ ಕರಡನ್ನು, ಸದರಿ ಅಧಿನಿಯಮದ 3ನೇ ಪ್ರಕರಣದ (2)ನೇ ಉಪ ಪ್ರಕರಣದ (ಎ) ಖಂಡದ ಮೂಲಕ ಅಗತ್ಯಪಡಿಸಲಾದಂತೆ ಇದರಿಂದ ಬಾಧಿತರಾಗುವ ಸಂಭವವಿರುವ ಎಲ್ಲಾ ವ್ಯಕ್ತಿಗಳ ಮಾಹಿತಿಗಾಗಿ, ಈ ಮೂಲಕ ಪ್ರಕಟಿಸಲಾಗಿದೆ ಮತ್ತು ಸದರಿ ಕರಡನ್ನು ಅಧಿಕೃತ ರಾಜ್ಯಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ ಹದಿನೈದು ದಿನಗಳ ನಂತರ ಪರಿಗಣನೆಗೆ ತೆಗೆದುಕೊಳ್ಳಲಾಗುವುದೆಂದು ಈ ಮೂಲಕ ಸೂಚಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸದರಿ ಕರಡು ನಿಯಮಗಳಿಗೆ ಸಂಬಂಧಪಟ್ಟಂತೆ ಮೇಲೆ ಗೊತ್ತುಪಡಿಸಿದ ಅವಧಿ ಕೊನೆಗೊಳ್ಳುವ ಮುಂಚೆ ಯಾರೇ ವ್ಯಕ್ತಿಯಿಂದ ರಾಜ್ಯ ಸರ್ಕಾರವು ಸ್ವೀಕರಿಸಬಹುದಾದ ಯಾವುದೇ ಆಕ್ಷೇಪಣೆ ಅಥವಾ ಸಲಹೆಯನ್ನು ರಾಜ್ಯ ಸರ್ಕಾರವು ಪರಿಗಣಿಸುತ್ತದೆ. ಆಕ್ಷೇಪಣೆಗಳು ಅಥವಾ ಸಲಹೆಗಳನ್ನು ಸರ್ಕಾರದ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ವಿಧಾನಸೌಧ, ಬೆಂಗಳೂರು-560001 ಇವರಿಗೆ ಸಲ್ಲಿಸತಕ್ಕದ್ದು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular