HomeKarnatakaBIG NEWS : ʻಭ್ರೂಣ ಹತ್ಯೆʼ ತಡೆಗೆ ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ : ರಾಜ್ಯ...

BIG NEWS : ʻಭ್ರೂಣ ಹತ್ಯೆʼ ತಡೆಗೆ ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ : ರಾಜ್ಯ ಮಟ್ಟದ ʻಕಾರ್ಯಪಡೆʼ ರಚನೆ

ಬೆಳಗಾವಿ : ಕೊಲೆಗಿಂತ ಕಡಿಮೆಯಲ್ಲ ಭ್ರೂಣ ಹತ್ಯೆ ಎನ್ನುವ ಭಾವನೆಯನ್ನು ಇಡೀ ಸದನ ವ್ಯಕ್ತಪಡಿಸಿದೆ. ಈ ಪ್ರಕರಣದಲ್ಲಿ ಯಾವ ಸೆಕ್ಷನ್‌ ಅಡಿ ಪ್ರಕರಣ ದಾಖಲಿಸಬೇಕು, ಕಾನೂನಾತ್ಮಕವಾಗಿ ಹೇಗೆ ಎದುರಿಸಬೇಕು ಎಂಬುದರ ಬಗ್ಗೆಯೂ ಗಂಭೀರವಾಗಿ ಚಿಂತನೆ ಮಾಡುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಚಿವ ದಿನೇಶ್‌ ಗುಂಡೂರಾವ್‌,  ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆಯನ್ನು ಸಂಪೂರ್ಣವಾಗಿ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾ ಹಾಗೂ  ರಾಜ್ಯ ಮಟ್ಟದಲ್ಲಿ ಟಾಸ್ಕ್ ಪೋರ್ಸ್ ರಚಿಸಲು ನಿರ್ಧರಿಸಲಾಗಿದೆ. ಆಸ್ಪತ್ರೆಗಳು, ಲ್ಯಾಬ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದು ಸೇರಿದಂತೆ  ಪ್ರತಿ ಮೂರು ತಿಂಗಳಿಗೊಮ್ಮೆ ವರದಿ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 ಭ್ರೂಣ ಹತ್ಯೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆ ಜಂಟಿಯಾಗಿ ಕಾರ್ಯನಿರ್ವಹಿಸಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಟಾಸ್ಕ್‌ಫೋರ್ಸ್‌ಗೆ ACP ಅಥವಾ DYSP ಶ್ರೇಣಿಯ ಅಧಿಕಾರಿಯನ್ನು ನೇಮಿಸುವ ಕುರಿತು ಗೃಹ ಇಲಾಖೆಯ ಜೊತೆ ಚರ್ಚೆ ನಡೆಸಿದ್ದೇನೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular