HomeKarnatakaBIG NEWS : 'ಕೃಷ್ಣ ಮೇಲ್ದಂಡೆ ಯೋಜನೆ' ಹಂತ-3 ಪೂರ್ಣಗೊಳಿಸಲು ರಾಜ್ಯ ಸರ್ಕಾರ ಬದ್ದ :...

BIG NEWS : ‘ಕೃಷ್ಣ ಮೇಲ್ದಂಡೆ ಯೋಜನೆ’ ಹಂತ-3 ಪೂರ್ಣಗೊಳಿಸಲು ರಾಜ್ಯ ಸರ್ಕಾರ ಬದ್ದ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಪೂರ್ಣಗೊಳಿಸಲು ರಾಜ್ಯ ಸರ್ಕಾರ ಬದ್ದವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ರಡಿ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕುರಿತ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ.

ಆಲಮಟ್ಟಿ ಜಲಾಶಯದ ನೀರಿನ ಸಂಗ್ರಹ ಮಟ್ಟವನ್ನು ಆರ್.ಎಲ್. 519.60 ಮೀ. ನಿಂದ 524.26 ಮೀ. ರವರೆಗೆ ಎತ್ತರಿಸಿ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಪೂರ್ಣಗೊಳಿಸಲು ಸರ್ಕಾರ ಬದ್ಧವಾಗಿದೆ. * ಹಂತ ಹಂತವಾಗಿ ಯೋಜನೆಯನ್ನು ಪೂರ್ಣಗೊಳಿಸಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯೋಜನೆಗಾಗಿ ಮುಳುಗಡೆ ಹೊಂದಲಿರುವ ಜಮೀನು, ಪುನರ್ವಸತಿ ಹಾಗೂ ಕಾಲುವೆ ನಿರ್ಮಾಣಕ್ಕಾಗಿ ಅಂದಾಜು ಒಟ್ಟಾರೆ 1,33,867 ಎಕರೆ ಜಮೀನು ಸ್ವಾಧೀನಪಡಿಸಬೇಕಾಗಿದೆ. – ಇದುವರೆಗೆ 28,967 ಎಕರೆ ಸ್ವಾಧೀನಪಡಿಸಲಾಗಿದ್ದು, 1,04,963 ಎಕರೆ ಸ್ವಾಧೀನಪಡಿಸಲು ಬಾಕಿಯಿದೆ. * ಜಲಾಶಯದ ಹಿನ್ನೀರಿನಿಂದ ಮುಳುಗಡೆಯಾಗಲಿರುವ 188 ಗ್ರಾಮಗಳಿಗೆ ಸಂಬಂಧಿಸಿದಂತೆ 73,020 ಎಕರೆ ಜಮೀನು ಭೂಸ್ವಾಧೀನಕ್ಕೆ ಬಾಕಿಯಿದೆ. * 2022ರಲ್ಲಿ ಅಂದಿನ ಸರ್ಕಾರ ಮುಳುಗಡೆಯಾಗುವ ಜಮೀನನ್ನು ಎರಡು ಹಂತದಲ್ಲಿ ಭೂಸ್ವಾಧೀನಪಡಿಸುವ ನಿರ್ಧಾರ ಕೈಗೊಂಡಿತ್ತು. ಇದನ್ನು ಬದಲಾಯಿಸಿ ಈಗ ಪ್ರಥಮ ಪ್ರಾಶಸ್ತ್ಯದಲ್ಲಿ ಒಂದೇ ಹಂತದಲ್ಲಿ ಈ ಜಮೀನು ಭೂಸ್ವಾಧೀನಕ್ಕೆ ಕ್ರಮ ಕೈಗೊಳ್ಳಲಾಗುವುದು. * ಜಮೀನು ಕಳೆದುಕೊಳ್ಳುವ ರೈತರಿಗೆ ಜಮೀನಿನ ಮಾರುಕಟ್ಟೆ ದರ, ಆಸ್ತಿಯ ಮಾರ್ಗದರ್ಶಿ ಮೌಲ್ಯ, ಭೂಸ್ವಾಧೀನ ಕಾಯ್ದೆಯನ್ನು ಗಮನದಲ್ಲಿರಿಸಿ ನ್ಯಾಯಯುತ ಪರಿಹಾರ ಒದಗಿಸಲು ಸರ್ಕಾರ ಬದ್ಧವಾಗಿದೆ. * ರೈತರಿಗಾಗಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಜಮೀನಿಗೆ ಪರಿಹಾರ ನೀಡುವ ಕುರಿತು ಸಹಮತದ ದರ ನಿಗದಿಪಡಿಸಲು ಎಲ್ಲರೂ ಮುಂದೆ ಬರಬೇಕು. ರೈತರಿಗೂ ಅನ್ಯಾಯವಾಗಬಾರದು, ಸರ್ಕಾರಕ್ಕೂ ಹೊರೆಯಾಗದಂತೆ ನಿರ್ಣಯಕ್ಕೆ ಬರಲಾಗುವುದು. * ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ 20ಸಾವಿರ ಪ್ರಕರಣಗಳು ನ್ಯಾಯಾಲಯದಲ್ಲಿವೆ. ಈ ಪ್ರಕರಣಗಳನ್ನು ಹಿಂಪಡೆದುಕೊಂಡು ಸಹಮತದ ಮೂಲಕ ಬಗೆಹರಿಸಲು ಪ್ರಯತ್ನಿಸಬೇಕು ಎಂದರು.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular