BIG NEWS : ರಾಜ್ಯ ಸರ್ಕಾರದಿಂದ ʻಪರೀಕ್ಷಾ ಅಕ್ರಮ ತಡೆಗೆ ಮಸೂದೆ ಮಂಡನೆʼ : ಅಕ್ರಮದಲ್ಲಿ ಭಾಗಿಯಾದವರಿಗೆ 12 ವರ್ಷ ಜೈಲು ಶಿಕ್ಷೆ!

ಬೆಂಗಳೂರು : ಪರೀಕ್ಷಾ ಅಕ್ರಮ ತಡೆ ಮಸೂದೆಯನ್ನು ವಿಧಾನಸಭೆಯಲ್ಲಿ  ಮಂಡಿಸಲಾಗಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆ, ಅಕ್ರಮ ಸಂಗ್ರಹ ಹಾಗೂ ವಿತರಣೆ, ಡಿಜಿಟಲ್‌ ಸಾಧನಗಳ ಮೂಲಕ ಉತ್ತರ ಪಡೆಯುವುದು ಮತ್ತು ಪೂರೈಸುವುದು, ಒಎಂಆರ್‌ ಶೀಟ್‌ಗಳನ್ನು ತಿದ್ದುವುದು ಸೇರಿದಂತೆ ಎಲ್ಲ ಬಗೆಯ ಪರೀಕ್ಷಾ ಅಕ್ರಮಗಳನ್ನು ಮಸೂದೆಯ ವ್ಯಾಪ್ತಿಗೆ ತರಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಪ್ರಿಯಾಂಕ್‌ ಖರ್ಗೆ,  ನಮ್ಮ ರಾಜ್ಯದ ಯುವಜನತೆಯ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ನಮ್ಮ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ 6 ತಿಂಗಳಲ್ಲಿ ಪರೀಕ್ಷಾ ಅಕ್ರಮ ತಡೆ ಮಸೂದೆಯನ್ನು ಕಾಯಿದೆಯನ್ನಾಗಿ ಜಾರಿಗೆ ತಂದಿದೆ ಎಂದರು.

ಕಳೆದ ವರ್ಷದ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಇದನ್ನು ಖಾಸಗಿ ಮಸೂದೆಯಾಗಿ ಜಾರಿಗೆ ತರಲು ನಾನು ಸಾಕಷ್ಟು ಪ್ರಯತ್ನಪಟ್ಟಿದ್ದೆ. ಆದರೆ ಬಿಜೆಪಿ ಸರ್ಕಾರ ಅದಕ್ಕೆ ಅವಕಾಶ ನೀಡಿರಲಿಲ್ಲ. ಆದ್ದರಿಂದ ಈ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಕರ್ನಾಟಕ ಸಾರ್ವಜನಿಕ ಪರೀಕ್ಷೆ (ನೇಮಕಾತಿಯಲ್ಲಿನ ಭ್ರಷ್ಟಾಚಾರ ಮತ್ತು ಅನುಚಿತ ವಿಧಾನಗಳ ಪ್ರತಿಬಂಧಕ ಕ್ರಮಗಳು) ಮಸೂದೆ 2023 ಅನ್ನು ಮಂಡಿಸಿ ಅಂಗೀಕಾರ ಪಡೆದಿದ್ದೇನೆ ಎಂದು ಹೇಳಿದ್ದಾರೆ.

ಈಗಾಗಲೇ ಅಕ್ರಮಗಳಿಗೆ ತಡೆಬೇಲಿ ಹಾಕಿದ ನಮ್ಮ ಸರ್ಕಾರ ಪರೀಕ್ಷೆಯಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ಪೂರ್ಣವಿರಾಮವಿಟ್ಟು, ಅಕ್ರಮಗಳಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಸಿದ್ಧವಾಗಿದೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read