BIG NEWS : ರಾಜ್ಯದ ಆಸ್ತಿ ಮಾಲೀಕರೇ ಗಮನಿಸಿ : ಎ & ಬಿ ಖಾತಾ ಪಡೆಯಲು ಈ ದಾಖಲೆಗಳು ಕಡ್ಡಾಯ.!

ಬೆಂಗಳೂರು : ನಿವೇಶನ/ಕಟ್ಟಡಗಳಿಗೆ ಬಿ-ಖಾತೆ ನೀಡಲು ಅವಕಾಶ ಕಲ್ಪಿಸಿಕೊಡಲಾಗಿದ್ದು, ಆಸ್ತಿ ಮಾಲೀಕರು ಪಟ್ಟಣ ಪಂಚಾಯಿತಿ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಕಟಣೆ ಹೊರಡಿಸಲಾಗಿದೆ.

ಎ-ಖಾತೆ ಪಡೆಯಲು ಆಸ್ತಿಗೆ ಸಂಬಂಧಿಸಿದ ಸ್ವತ್ತಿನ ಮಾಲೀಕತ್ವ ಸಾಬೀತು ಮಾಡಿಸುವ ಮೊಂದಾಯಿತ ಮಾರಾಟ ಪತ್ರಗಳು/ದಾನ ಪತ್ರ/ವಿಭಾಗ ಪತ್ರಗಳು ಅಥವಾ ಸರ್ಕಾರದ ನಿಗಮ ಮಂಡಳಿಗಳಿಂದ ನೀಡಲಾದ ಹಕ್ಕುಪತ್ರಗಳು/ ಮಂಜೂರಾತಿ ಪತ್ರಗಳು, ಕಂದಾಯ ಇಲಾಖೆಯಿಂದ 94 ಸಿ.ಸಿ. ಅಡಿ ನೀಡಲಾದ ಹಕ್ಕುಪತ್ರ. ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾದ ದೃಢೀಕೃತ ಪ್ರತಿ ಮತ್ತು ನಿವೇಶನ ಬಿಡುಗಡೆ ಪತ್ರ. ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ. ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಶೀದಿ. ಮಾಲೀಕರ ಫೋಟೋ ಮತ್ತು ಸ್ವತ್ತಿನ ಫೋಟೋ. ಮಾಲೀಕರ ಗುರುತಿನ ದಾಖಲೆ ಪ್ರತಿ ಮತ್ತು ಕಟ್ಟಡವಿದ್ದಲ್ಲಿ ವಿದ್ಯುಚ್ಛಕ್ತಿ ಬಿಲ್ ಪ್ರತಿಗಳನ್ನು ಸಲ್ಲಿಸುವುದು.

ಬಿ-ಖಾತೆ ಪಡೆಯಲು ಆಸ್ತಿಗೆ ಸಂಬಂಧಿಸಿದಂತೆ ಸ್ವತ್ತಿನ ಮಾಲೀಕತ್ವ ಸಾಬೀತು ಪಡಿಸುವ ದಿ: 10/09/2024ರ ಪೂರ್ವದಲ್ಲಿ ನೊಂದಾಯಿತ ಮಾರಾಟ ಪತ್ರಗಳು/ ದಾನ ಪತ್ರ/ವಿಭಾಗ ಪತ್ರಗಳು/ಹಕ್ಕು ಖುಲಾಸೆ ಪತ್ರಗಳು. ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ. ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಶೀದಿ. ಮಾಲೀಕರ ಫೋಟೋ ಮತ್ತು ಸ್ವತ್ತಿನ ಫೋಟೋ. ಮಾಲೀಕರ ಗುರುತಿನ ದಾಖಲೆ ಪ್ರತಿಗಳನ್ನು ಸಲ್ಲಿಸುವುದು. ಈ ಪ್ರಕಟಣೆ ದಿನಾಂಕದಿಂದ ಮೂರು ತಿಂಗಳೊಳಗೆ ದಾಖಲೆಗಳನ್ನು ಸಲ್ಲಿಸಿ ಬಿ-ಖಾತೆಯನ್ನು ಪಡೆಯಬಹುದಾಗಿದೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read