HomeLive NewsBIG NEWS : ಇ-ಸ್ವತ್ತು ವಿತರಣೆಯನ್ನು ಸುಗಮಗೊಳಿಸಲು ಕ್ರಮ : ಸಚಿವ ಪ್ರಿಯಾಂಕ್ ಖರ್ಗೆ

BIG NEWS : ಇ-ಸ್ವತ್ತು ವಿತರಣೆಯನ್ನು ಸುಗಮಗೊಳಿಸಲು ಕ್ರಮ : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ಇ-ಸ್ವತ್ತು ವಿತರಣೆಯನ್ನು ಸುಗಮಗೊಳಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಇ ಸ್ವತ್ತು ವಿಚಾರಕ್ಕೆ ಸಂಬಂಧಿಸಿದಂತೆ ಸಭೆ ನಡೆಸಿ ಮಾತನಾಡಿದರು.

ವಿಧಾನ ಮಂಡಲದ ಅಧಿವೇಶನದಲ್ಲಿ ಇ-ಸ್ವತ್ತು ವಿತರಣೆಗೆ ಅನುವಾಗುವಂತೆ 199 (ಬಿ) ನಿಯಮಗಳಿಗೆ ತಿದ್ದುಪಡಿ ತರಲಾಗಿದ್ದು, ಅದಕ್ಕೆ ಅನುಗುಣವಾಗಿ ಇ-ಸ್ವತ್ತು ವಿತರಣೆಯನ್ನು ಸುಗಮಗೊಳಿಸಲು ನಿಯಮಗಳನ್ನು ಸಿದ್ಧಪಡಿಸಲಾಗುತ್ತಿದೆ. ನಿಯಮಾವಳಿಗಳು ಈ ಮಾಸಾಂತ್ಯಕ್ಕೆ ಸಿದ್ಧಗೊಳ್ಳುತ್ತಿದ್ದು, ಜುಲೈ ಎರಡನೆಯ ವಾರದಲ್ಲಿ ಅಂತಿಮ ನಿಯಮಾವಳಿಗಳು ಪ್ರಕಟಗೊಳ್ಳಲಿವೆ, ಆನಂತರ ಇ–ಸ್ವತ್ತು ವಿತರಣೆ ಸಂಬಂಧಿಸಿದಂತೆ ಮಾರ್ಗಸೂಚಿಗಳನ್ನು ಹೊರಡಿಸಲಾಗುವುದು. ಇ-ಸ್ವತ್ತು ಆಸ್ತಿ ನಮೂನೆಗಳನ್ನು ವಿತರಿಸುವದರಿಂದ ರಾಜ್ಯದ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ 1.45 ಕೋಟಿ ಆಸ್ತಿಗಳು ಇ-ಸ್ವತ್ತು ತೆಕ್ಕೆಗೆ ಬರುವ ನಿರೀಕ್ಷೆ ಇದ್ದು, ಸಾರ್ವಜನಿಕರ ಆಸ್ತಿಗಳು ಅಧಿಕೃತಗೊಳ್ಳುವದಲ್ಲದೆ, ಗ್ರಾಮ ಪಂಚಾಯತಿಗಳ ಆದಾಯ ಕೂಡ ಹೆಚ್ಚಲಿದೆ, ಇದರಿಂದ ಗ್ರಾಮಗಳ ಅಭಿವೃದ್ಧಿ ಸಾಧ್ಯವಾಗಲಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular