HomeKarnatakaBIG NEWS : ಕ್ರಿಸ್ಮಸ್ -ಹೊಸ ವರ್ಷಾಚರಣೆಗೆ ರಾಜ್ಯ ಸರ್ಕಾರದಿಂದ ಕಟ್ಟುನಿಟ್ಟಿನ ಕ್ರಮ : ಗೃಹ...

BIG NEWS : ಕ್ರಿಸ್ಮಸ್ -ಹೊಸ ವರ್ಷಾಚರಣೆಗೆ ರಾಜ್ಯ ಸರ್ಕಾರದಿಂದ ಕಟ್ಟುನಿಟ್ಟಿನ ಕ್ರಮ : ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು : ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆಗಾಗಿ ಬೆಂಗಳೂರು ನಗರ ಸಜ್ಜಾಗುತ್ತಿದ್ದು ರಾಜ್ಯ ಸರ್ಕಾರ ಕೆಲವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ.

ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡಿದ್ದು ಸಂಭ್ರಮಾಚರಣೆಯ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆವಹಿಸಲು ನಿರ್ದೇಶನ ನೀಡಲಾಗಿದೆ. ವಾಹನ ದಟ್ಟಣೆ ನಿಯಂತ್ರಣ, ಪಾರ್ಕಿಂಗ್ ವ್ಯವಸ್ಥೆಗೆ ನಿಯಮಗಳನ್ನು ರೂಪಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.
ಹೊಸ ವರ್ಷ ಆಚರಿಸುವವರಿಗೆ ಆಡಚಣೆ ಮಾಡುವುದು ಬೇಡ. ಅವರಿಗೆ ಸುರಕ್ಷತೆ ನೀಡಬೇಕು. ತೊಂದರೆ ಉಂಟು ಮಾಡುವ ಕಿಡಿಗೇಡಿಗಳ ಮೇಲೆ ನಿಗಾವಹಿಸಿ ಕಠಿಣ ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದರು.

ಹೊಸ ವರ್ಷ ಆಚರಣೆ ವೇಳೆ ಯಾವುದೇ ರೀತಿಯ ಅನಾಹುತಗಳು ಸಂಭವಿಸಿದರೆ ಸಂಬಂಧಪಟ್ಟ ಡಿಸಿಪಿ, ಎಸಿಪಿ, ಇನ್ಸ್ಪೆಕ್ಟರ್ಗಳನ್ನೇ ಹೊಣೆ ಮಾಡಲಾಗುವುದು, ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಅನಗತ್ಯ ರಜೆ ನೀಡುವುದು ಬೇಡ, ತೀವ್ರ ಅನಿವಾರ್ಯತೆ ಇದ್ದರೆ ರಜೆ ನೀಡಿ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular