HomeLatest NewsBIG NEWS: ರಾಜ್ಯದಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆಗೆ ಕಟ್ಟು ನಿಟ್ಟಿನ ನಿಯಮ ಜಾರಿ: ಡಿಸಿ ನೇತೃತ್ವದಲ್ಲಿ...

BIG NEWS: ರಾಜ್ಯದಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆಗೆ ಕಟ್ಟು ನಿಟ್ಟಿನ ನಿಯಮ ಜಾರಿ: ಡಿಸಿ ನೇತೃತ್ವದಲ್ಲಿ ಸಮಿತಿ ರಚನೆ

ಬೆಂಗಳೂರು: ರಾಜ್ಯದಲ್ಲಿ ಪ್ಲಾಸ್ಟಿಕ್‌ ಬಾಟಲ್‌ ತ್ಯಾಜ್ಯವನ್ನು ನಿಯಂತ್ರಿಸಲು, ಬಾಟಲ್‌ಗಳ ಉತ್ಪಾದಕರು ಮರು ಖರೀದಿಸುವ ಹೊಣೆಗಾರಿಕೆಯನ್ನು ನಿರ್ವಹಿಸುತ್ತಿರುವ ಬಗ್ಗೆ ನಿಗಾವಹಿಸಲು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಜಿಲ್ಲಾಮಟ್ಟದ ಮೇಲ್ವಿಚಾರಣಾ ಸಮಿತಿಯನ್ನು ರಚಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.

ಸಮಿತಿಗೆ ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ನಿಗದಿಪಡಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ. ಪೆಟ್‌ ಬಾಟಲ್‌ ತಯಾರಿಕೆ, ಮಾರಾಟದಲ್ಲಿರುವ ಉತ್ಪಾದಕರು, ಆಮದುದಾರರು ಮತ್ತು ಬ್ರ್ಯಾಂಡ್‌ ಮಾಲೀಕರು, ‘ಉತ್ಪಾದಕರಿಗೆ ಹೊಣೆಗಾರಿಕೆ ವಿಸ್ತರಣೆ’ಯ (ಇಪಿಆರ್) ನಿಯಮಗಳನ್ನು ಅನುಪಾಲನೆ ಮಾಡುತ್ತಿದ್ದಾರೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳುವುದು ಜಿಲ್ಲಾಮಟ್ಟದ ಸಮಿತಿಯ ಪ್ರಾಥಮಿಕ ಜವಾಬ್ದಾರಿಯಾಗಿದೆ.

ಪೆಟ್ ಬಾಟಲ್ ಚಾರ್ಜರ್ ನಿರ್ವಹಣೆ ಬಗ್ಗೆ ವಿಶೇಷ ಗಮನಹರಿಸಿ ಪ್ಲಾಸ್ಟಿಕ್ ನಿರ್ವಹಣೆ ನಿಯಮ ಅನುಷ್ಠಾನಗೊಳಿಸಿ ಪ್ಲಾಸ್ಟಿಕ್ ತ್ಯಾಜ್ಯ ನಿಯಂತ್ರಿಸಬೇಕು. ಪ್ಲಾಸ್ಟಿಕ್ ಮಾಲಿನ್ಯ ಕಡಿಮೆ ಮಾಡುವುದರೊಂದಿಗೆ ಬಳಕೆ ನಿಯಂತ್ರಿಸಿ ಕಾರ್ಯವಿಧಾನ ಜಾರಿಗೊಳಿಸಲು ಜಿಲ್ಲಾ ಮಟ್ಟದ ಸಮಿತಿ ರಚಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular