BIG NEWS : ಬರ್ತ್’ಡೇ ಪಾರ್ಟಿಯಲ್ಲಿ ತಲ್ವಾರ್ ಪ್ರದರ್ಶಿಸಿದ ಬಿಜೆಪಿ ನಾಯಕ : ಸಚಿವ ಪ್ರಿಯಾಂಕ್ ಖರ್ಗೆ ಕಿಡಿ

ಬೆಂಗಳೂರು : ಬರ್ತ್ ಡೇ ಪಾರ್ಟಿಯಲ್ಲಿ ಬಿಜೆಪಿ ನಾಯಕರೊಬ್ಬರು ತಲ್ವಾರ್ ಪ್ರದರ್ಶನ ಮಾಡಿದ್ದು, ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ನಲ್ಲಿ ಕಿಡಿಕಾರಿದ್ದಾರೆ.

ಬಿಜೆಪಿಯ ಮಾಜಿ ಶಾಸಕ ರಾಜ್ ಕುಮಾರ್ ಪಾಟೀಲ್ ತೇಲ್ಕೂರ್ ಅವರ ಸಹೋದರ ಜಿ ಬಿ ಪಾಟೀಲ್ ತಲ್ವಾರ್ ನಿಂದ ಕೇಕ್ ಕತ್ತರಿಸಿ ವಿಜೃಂಭಣೆ ನಡೆಸಿದ್ದಾರೆ. ಈ ಫೋಟೋ. ವಿಡಿಯೋಗಳು ವೈರಲ್ ಆಗಿದ್ದು, ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ನಲ್ಲಿ ಕಿಡಿಕಾರಿದ್ದಾರೆ.

ಬಿಜೆಪಿಯ ಮಾಜಿ ಶಾಸಕ ರಾಜ್ ಕುಮಾರ್ ಪಾಟೀಲ್ ತೇಲ್ಕೂರ್ ಅವರ ಸಹೋದರ ಜಿ ಬಿ ಪಾಟೀಲ್ ತಲ್ವಾರ್ ನಿಂದ ಕೇಕ್ ಕತ್ತರಿಸಿ ವಿಜೃಂಭಣೆ ನಡೆಸಿದ್ದಾರೆ, ಇದು “ಕಲಬುರಗಿ ರಿಪಬ್ಲಿಕ್“ ಮಾಡುವ ಪ್ರಯತ್ನವೇ? ಬಿಜೆಪಿಗರ ಪ್ರಕಾರ ಇದು ಗೂಂಡಾಗಿರಿಯ ವ್ಯಾಪ್ತಿಗೆ ಬರುವುದಿಲ್ಲವೇ? ಕಲಬುರಗಿ ರಿಪಬ್ಲಿಕ್ ಎನ್ನುತ್ತಿದ್ದ ಬೆಂಗಳೂರಿನ ಬಿಜೆಪಿ ನಾಯಕರು ತಮ್ಮದೇ ಪಕ್ಷದವರ ಈ ಕುಕೃತ್ಯಕ್ಕೆ ಯಾವ ಸಮಜಾಯಿಷಿ ನೀಡುತ್ತಾರೆ? ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಚಿತ್ರವನ್ನು ಕಾಲಿನ ಸಮದಲ್ಲಿಟ್ಟು ಅಂಬೇಡ್ಕರ್ ವಿರೋಧಿ ಅಮಿತ್ ಶಾ ಅವರನ್ನು ಮೆಚ್ಚಿಸುವ ಪ್ರಯತ್ನವೇ@BJP4Karnataka? ಡಾ। ಅಂಬೇಡ್ಕರ್ ಅವರ ಫೋಟೋ ಕಾಲ ಕೆಳಗಿಟ್ಟುಕೊಂಡು ತಲ್ವಾರ್ ಹಿಡಿದು ಕೇಕೆ ಹಾಕುತ್ತಿರುವ ಬಿಜೆಪಿಗರು ಗೂಂಡಾಗಿರಿ ಪ್ರದರ್ಶಿಸಿರುವುದಲ್ಲದೆ ಬಾಬಾ ಸಾಹೇಬರ ಘನತೆಗೆ ಚ್ಯುತಿ ತಂದಿದ್ದಾರೆ. ಈ ಕೃತ್ಯಕ್ಕೆ ಬಿಜೆಪಿಯವರು ಸಮರ್ಥನೆ ಮಾಡಿಕೊಳ್ಳುತ್ತಾರಾ ಅಥವಾ ಇಂತಹ ಘೋರ ಅಪರಾಧ ಮಾಡಿದವರ ವಿರುದ್ಧ ಕ್ರಮ ಜರುಗಿಸುತ್ತಾರಾ? ಇದಕ್ಕಾಗಿ ಒಂದು ಸತ್ಯ ಶೋಧನ ಸಮಿತಿ ರಚಿಸಿಕೊಂಡು, ನಕಲಿ ಅಂಬೇಡ್ಕರ್ ವಾದಿಗಳಾದ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕರ ಜೊತೆಗೆ ಯಾವಾಗ ಕಲಬುರ್ಗಿಗೆ ಬರುತ್ತೀರಿ @BYVijayendra ಅವರೇ? ಎಂದು ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read