BIG NEWS : ಉಸಿರಾಟದ ತೊಂದರೆ, ಕೋವಿಡ್ ಲಕ್ಷಣ ಹೊಂದಿರುವವರಿಗೆ ʻಪರೀಕ್ಷೆʼ ಕಡ್ಡಾಯ : ದಿನೇಶ್ ಗುಂಡೂರಾವ್

ಬೆಂಳೂರು : ಈ ಕುರಿತು ಮಾಹಿತಿ ನೀಡಿರುವ ಸಚಿವರು,  ಕೋವಿಡ್‌ಗೆ ಸಂಬಂಧಿಸಿ ಅನಗತ್ಯ ಆತಂಕ ಬೇಡ. ರಾಜ್ಯದಲ್ಲಿ ಕೋವಿಡ್‌ ಪರೀಕ್ಷೆ ಹೆಚ್ಚಿಸಲಾಗುವುದು, ಉಸಿರಾಟದ ತೊಂದರೆ ಹಾಗೂ ಕೋವಿಡ್‌ ಲಕ್ಷಣ ಹೊಂದಿರುವವರಿಗೆ ಪರೀಕ್ಷೆ ಕಡ್ಡಾಯಗೊಳಿಸಲಾಗುವುದು ಎಂದು ಹೇಳಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಚಿವರು, ರಾಜ್ಯದಲ್ಲಿ ಕೊರೊನಾ ಮುನ್ನೆಚ್ಚರಿಕೆಯಾಗಿ 60 ವರ್ಷ ತುಂಬಿದವರು ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು.  ರಾಜ್ಯದಲ್ಲಿ ಲಾಕ್ ಡೌನ್ ಮಾಡುವ ಅವಶ್ಯಕತೆ ಇಲ್ಲ. ಪಾಸಿಟಿವ್ ಬಂದರೆ ಮಾತ್ರ ನಿರ್ಬಂಧ ವಿಧಿಸುತ್ತೇವೆ. ಸದ್ಯ ಸಹಜ ಸ್ಥಿತಿ ಇದೆ. ಯಾವುದೇ ನಿರ್ಬಂಧನೆ ಇಲ್ಲ. ಕೆಮ್ಮು ಇದ್ದವರು ಜನಸಂದಣಿಗೆ ಹೋಗುವಂತಿಲ್ಲ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಕೊರೊನಾ ವೈರಾಣುವಿನ ಹೊಸ ರೂಪಾಂತರಿ ಕುರಿತು ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ. ಆದರೆ 60 ವರ್ಷ ಮೇಲ್ಪಟ್ಟವರು ಮತ್ತು ಹೃದಯ, ಕಿಡ್ನಿ ಸಂಬಂಧಿತ ಖಾಯಿಲೆ, ಜ್ವರ, ಕಫ, ಶೀತ ಇರುವವರು ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಮುನ್ನೆಚ್ಚರಿಕೆಯ ಕ್ರಮವಾಗಿ ರಾಜ್ಯದ ಎಲ್ಲಾ ಆಸ್ಪತ್ರೆ ಹಾಗೂ ಆರೋಗ್ಯ ಕೇಂದ್ರಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಆಕ್ಸಿಜನ್, ಔಷಧಗಳ ಸಂಗ್ರಹ, ಐಸಿಯು ಮತ್ತು ಹಾಸಿಗೆ ಸಾಮರ್ಥ್ಯಗಳ ಲಭ್ಯತೆ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.

ನೆರೆಯ ಕೇರಳದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳು ಏರಿಕೆಯಾಗಿರುವುದರಿಂದ ಕೊಡಗು, ಮಂಗಳೂರು, ಚಾಮರಾಜನಗರದ ಗಡಿ ಭಾಗಗಳ ಮೂಲಕ ರಾಜ್ಯಕ್ಕೆ ಪ್ರವೇಶಿಸುವವರ ತಪಾಸಣೆ ಸೇರಿದಂತೆ ಹೆಚ್ಚಿನ ನಿಗಾ ವಹಿಸುವಂತೆ ಸೂಚನೆ  ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read