HomeLatest NewsBIG NEWS: ಸಿಎಂ ಕುರ್ಚಿ ಕಿತ್ತಾಟ ಹೈಕಮಾಂಡ್ ಸೃಷ್ಟಿಸಿಲ್ಲ, ರಾಜ್ಯದವರೇ ಬಗೆಹರಿಸಿಕೊಳ್ಳಬೇಕು: ಖರ್ಗೆ ಅಚ್ಚರಿ ಹೇಳಿಕೆ

BIG NEWS: ಸಿಎಂ ಕುರ್ಚಿ ಕಿತ್ತಾಟ ಹೈಕಮಾಂಡ್ ಸೃಷ್ಟಿಸಿಲ್ಲ, ರಾಜ್ಯದವರೇ ಬಗೆಹರಿಸಿಕೊಳ್ಳಬೇಕು: ಖರ್ಗೆ ಅಚ್ಚರಿ ಹೇಳಿಕೆ

ಕಲಬುರಗಿ: ಮುಖ್ಯಮಂತ್ರಿ ಕುರ್ಚಿಗಾಗಿ ರಾಜ್ಯದಲ್ಲಿ ನಡೆಯುತ್ತಿರುವ ತಿಕ್ಕಾಟಕ್ಕೆ ಕಾಂಗ್ರೆಸ್ ಹೈಕಮಾಂಡ್ ಶೀಘ್ರವೇ ತೆರೆ ಎಳೆಯಬಹುದು ಎನ್ನುವ ಊಹಾಪೋಹಗಳಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೊಸ ಬಾಂಬ್ ಸಿಡಿಸಿದ್ದಾರೆ. ಇದು ಸ್ಥಳೀಯ ಸಮಸ್ಯೆ. ಇದನ್ನು ಸ್ಥಳೀಯ ನಾಯಕರು ಸರಿಪಡಿಸಿಕೊಳ್ಳಬೇಕು ಎಂದು ಅಚ್ಚರಿ ಹೇಳಿಕೆ ನೀಡಿದ್ದು ಭಾರಿ ಸಂಚಲನ ಮೂಡಿಸಿದೆ.

ಕುರ್ಚಿ ಕಿತ್ತಾಟ ಗೊಂದಲ ಸೃಷ್ಟಿಸಿದ್ದು ಹೈಕಮಾಂಡ್ ಅಲ್ಲ, ಸ್ಥಳೀಯವಾಗಿ ಸೃಷ್ಟಿಯಾಗಿರುವ ಸಮಸ್ಯೆ ಇದು. ಸ್ಥಳೀಯ ನಾಯಕತ್ವ ಹೊಣೆ ಹೊರಬೇಕು. ರಾಜ್ಯದವರೇ ಬಗೆಹರಿಸಿಕೊಳ್ಳಬೇಕು. ಹೈಕಮಾಂಡ್ ಅನ್ನು ದೋಷಿಸುವುದು, ನನ್ನಿಂದಲೇ ಪಕ್ಷ ಅಧಿಕಾರಕ್ಕೆ ಬಂತು ಎಂದು ಹೇಳುವುದನ್ನು ಮೊದಲು ನಿಲ್ಲಿಸಿ ಎಂದು ತಾಕೀತು ಮಾಡಿದ್ದಾರೆ.

ರಾಜ್ಯ ನಾಯಕತ್ವ ಕುರಿತ ಗೊಂದಲಗಳೆಲ್ಲ ಸ್ಥಳೀಯವಾಗಿ ಸೃಷ್ಟಿಸಿಕೊಳ್ಳಲಾದ ಸಮಸ್ಯೆಗಳು. ಹೈಕಮಾಂಡ್ ಇದನ್ನು ಸೃಷ್ಟಿ ಮಾಡಿಲ್ಲ. ಎಲ್ಲದಕ್ಕೂ ಹೈಕಮಾಂಡ್ ಕಾರಣವೆಂದು ಏಕೆ ದೂಷಿಸುತ್ತೀರಿ ಎಂದು ಪ್ರಶ್ನಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರ್ನಾಟಕದಲ್ಲಿನ ನಾಯಕತ್ವ ಗೊಂದಲ ಸ್ಥಳೀಯ ಮಟ್ಟದಲ್ಲಿ ಮಾತ್ರ ಇದೆ. ಹೈಕಮಾಂಡ್ ಮಟ್ಟದಲ್ಲಿ ಇಲ್ಲ. ಸಮಸ್ಯೆ ಸ್ಥಳೀಯವಾಗಿ ಸೃಷ್ಟಿಯಾಗಿರುವ ಕಾರಣ ಸ್ಥಳೀಯ ನಾಯಕರೆ ಇತ್ಯರ್ಥ ಮಾಡಿಕೊಳ್ಳಬೇಕು. ಯಾರೋ ಒಬ್ಬ ವ್ಯಕ್ತಿಯ ಪ್ರಯತ್ನದಿಂದ ಪಕ್ಷ ಸಂಘಟನೆ ಆಗಿಲ್ಲ. ಕಾರ್ಯಕರ್ತರು ಪಕ್ಷವನ್ನು ಕಟ್ಟಿದ್ದಾರೆ ಎಂದು ಖರ್ಗೆ ಹೇಳಿದ್ದಾರೆ. ಅವರ ಹೇಳಿಕೆ ಕಾಂಗ್ರೆಸ್ ಬಣಗಳು ಸೇರಿದಂತೆ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular