ಚಿತ್ರದುರ್ಗದಿಂದ ಶಿವಮೊಗ್ಗ ಜಿಲ್ಲೆಯ ಸಾಗರಕ್ಕೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿದ ಕಾರಣಕ್ಕೆ ಸೇತುವೆ ಪಕ್ಕದ ಹಳ್ಳಕ್ಕೆ ಬಿದ್ದಿರುವ ಘಟನೆ ಇಂದು ಬೆಳಗಿನ ಜಾವ ನಡೆದಿದೆ. ಘಟನೆಯಲ್ಲಿ ಮಹಿಳೆಯರು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ.
ಶಿವಮೊಗ್ಗ ಸಮೀಪದ ಆಯನೂರು ಬಳಿ ಈ ಘಟನೆ ಸಂಭವಿಸಿದ್ದು, ಸ್ವಿಫ್ಟ್ ಡಿಸೈರ್ ಕಾರು ಚಲಾಯಿಸುತ್ತಿದ್ದ ಚಾಲಕ ನಿಯಂತ್ರಣ ಕಳೆದುಕೊಂಡ ಪರಿಣಾಮ ಸೇತುವೆ ಪಕ್ಕದ ಹಳ್ಳಕ್ಕೆ ಉರುಳಿ ಬಿದ್ದಿದೆ.
ಇದರ ಪರಿಣಾಮ ಕಾರಿನಲ್ಲಿದ್ದ ಮೂವರು ಮಹಿಳೆಯರು, ಬಾಲಕ ಹಾಗೂ ಚಾಲಕ ಗಾಯಗೊಂಡಿದ್ದು ಅವರುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.