BIG NEWS: ವಿದ್ಯಾರ್ಥಿನಿಯನ್ನು ಹತ್ಯೆಗೈದಿದ್ದ ರಕ್ಕಸ ಕೊನೆಗೂ ಅರೆಸ್ಟ್

10ನೇ ತರಗತಿ ಪಾಸ್ ಆದ ಖುಷಿಯಲ್ಲಿದ್ದ ವಿದ್ಯಾರ್ಥಿನಿಯನ್ನು ಫಲಿತಾಂಶ ಪ್ರಕಟಗೊಂಡ ದಿನವೇ ಹತ್ಯೆಗೈದಿದ್ದ ರಕ್ಕಸನನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ. ವಿದ್ಯಾರ್ಥಿನಿಯನ್ನು ಬರ್ಬರವಾಗಿ ಕೊಲೆಗೈದ ಬಳಿಕ ಈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂಬ ಸುದ್ದಿ ಹರಿದಾಡಿತ್ತಾದರೂ ಇದೀಗ ಆರೋಪಿ ಬಂಧನವಾಗಿದೆ.

ಸೋಮವಾರಪೇಟೆ ತಾಲೂಕಿನ ಗ್ರಾಮ ಒಂದರಲ್ಲಿ ಅಡಗಿಕೊಂಡಿದ್ದ ಆರೋಪಿ ಓಂಕಾರಪ್ಪನನ್ನು ಪೊಲೀಸರು ಬಂಧಿಸಿದ್ದು, ಆತನನ್ನು ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಲಾಗುತ್ತಿದೆ. ಆರೋಪಿ ಬಂಧನವನ್ನು ಕೊಡಗು ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಖಚಿತಪಡಿಸಿದ್ದಾರೆ.

ಪ್ರಕರಣದ ವಿವರ: 10ನೇ ತರಗತಿಯಲ್ಲಿ ಓದುತ್ತಿದ್ದ ಮೀನಾ ಎಂಬ ಅಪ್ರಾಪ್ತ ಬಾಲಕಿ ನಿಶ್ಚಿತಾರ್ಥ ಆರೋಪಿಯೊಂದಿಗೆ ನೆರವೇರಲು ಸಿದ್ಧತೆ ನಡೆದಿತ್ತು. ಆದರೆ ಇದರ ಮಾಹಿತಿ ಪಡೆದ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ಪೊಲೀಸರ ನೆರವಿನೊಂದಿಗೆ ತಡೆದಿದ್ದರು. ಇದೇ ಸಿಟ್ಟಿನಲ್ಲಿ ಓಂಕಾರಪ್ಪ, ಸೋಮವಾರ ಪೇಟೆ ತಾಲೂಕಿನ ಸೊರ್ಲಬ್ಬಿ ಗ್ರಾಮದ ತನ್ನ ಮನೆಯಲ್ಲಿ ಬಾಲಕಿ ಇದ್ದಾಗ ಆಕೆಯನ್ನು ಎಳೆದೊಯ್ದು ತಲೆಯನ್ನು ಕಡಿದು ಕೊಲೆ ಮಾಡಿದ್ದ. ಇದೀಗ ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read