HomeKarnatakaBIG NEWS : ‘ಮೈಕ್ರೋ ಫೈನಾನ್ಸ್’ ಕಂಪನಿಗಳಿಗೆ ಅಂಕುಶ, 'CM ಸಿದ್ದರಾಮಯ್ಯ' ನೇತೃತ್ವದಲ್ಲಿ ನಡೆದ ಸಭೆಯ...

BIG NEWS : ‘ಮೈಕ್ರೋ ಫೈನಾನ್ಸ್’ ಕಂಪನಿಗಳಿಗೆ ಅಂಕುಶ, ‘CM ಸಿದ್ದರಾಮಯ್ಯ’ ನೇತೃತ್ವದಲ್ಲಿ ನಡೆದ ಸಭೆಯ ಹೈಲೆಟ್ಸ್ ಹೀಗಿದೆ.!

ಬೆಂಗಳೂರು : ಸಾಲ ವಸೂಲಿಯ ಸಂದರ್ಭದಲ್ಲಿ ಸಾರ್ವಜನಿಕರಿಗೆ ಕಿರುಕುಳ ನೀಡುತ್ತಿರುವ ಮೈಕ್ರೋ ಫೈನಾನ್ಸ್ಗಳಿಗೆ ಅಂಕುಶ ಹಾಕುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿ, ಬಳಿಕ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

• ಬೆದರಿಸಿ ಬಲವಂತದ ಸಾಲ ವಸೂಲಾತಿ ಒಪ್ಪಲು ಸಾಧ್ಯವಿಲ್ಲ. ಬಡ ಸಾಲಗಾರರ ಹಿತವನ್ನು ಕಾಪಾಡಲು ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದೆ.

• ಯಾರಾದರೂ ಮೈಕ್ರೋ ಫೈನಾನ್ಸ್ ವ್ಯಕ್ತಿಗಳಿಂದ ಕಿರುಕುಳ ಎದುರಿಸುತ್ತಿದ್ದರೆ ಸ್ಥಳೀಯವಾಗಿ ಪೊಲೀಸರಿಗೆ ದೂರು ನೀಡಬೇಕು. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸಭೆ ನಡೆಸಿ ಈ ಕುರಿತ ಜನರಿಗೆ ಸೂಕ್ತ ತಿಳುವಳಿಕೆ ನೀಡಬೇಕು ಹಾಗೂ ಮೈಕ್ರೋ ಫೈನಾನ್ಸ್ ವ್ಯಕ್ತಿಗಳಿಗೆ ಎಚ್ಚರಿಕೆ ನೀಡಬೇಕು.
• ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳು ನೀಡುತ್ತಿರುವ ಕಿರುಕುಳದ ಬಗ್ಗೆ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಪ್ರತಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಹಾಯವಾಣಿ ಆರಂಭಿಸಲು ಸೂಚನೆ ನೀಡಿದ್ದೇನೆ. ಇಲ್ಲಿ ದೂರು ನೀಡಬಹುದು; ಪೊಲೀಸರು ಸ್ವಯಂಪ್ರೇರಿತರಾಗಿ ದೂರು ದಾಖಲಿಸಲು ಸೂಚನೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

• BANNING OF UNREGULATED LENDING ACTIVITIES ಕೇಂದ್ರ ಸರ್ಕಾರ ಕರಡು ಸಿದ್ಧಪಡಿಸಿದೆ. ಈ ಕುರಿತು ಸಮಗ್ರ ಸಮಾಲೋಚನೆ ನಡೆಸಿ, ಸಾಲದ ಸುಳಿಯಲ್ಲಿ ಸಿಲುಕಿರುವವರ ಹಿತ ಕಾಪಾಡಲು ಕ್ರಮ ವಹಿಸಲಾಗುವುದು. ಕಿರುಕುಳ ತಪ್ಪಿಸಲು ಸೂಕ್ತ ಕಾನೂನು ರಚಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು.

• ಸಾಲ ವಸೂಲಾತಿ ಕುರಿತಾಗಿ ಆರ್ಬಿಐ ಹಲವು ಮಾರ್ಗಸೂಚಿ ಹೊರಡಿಸಿದೆ. ಸಂಜೆ 5 ಗಂಟೆ ಬಳಿಕ ಮನೆಗೆ ಸಾಲ ವಸೂಲಾತಿಗೆ ಹೋಗಬಾರದು. ಬೆದರಿಕೆ ಹಾಕಬಾರದು. ವಸೂಲಾತಿಗೆ ಮೂರನೇ ವ್ಯಕ್ತಿಗಳನ್ನು ಬಳಸಿಕೊಳ್ಳಬಾರದು, ಇತ್ಯಾದಿ. ಇದನ್ನು ಉಲ್ಲಂಘಿಸುವವರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಲಾಗುತ್ತದೆ.
• ಒಂದು ಕುಟುಂಬಕ್ಕೆ ಎಷ್ಟು ಸಾಲ ನೀಡಬಹುದು ಎಂಬ ಬಗ್ಗೆ ಆರ್ಬಿಐ ಮಿತಿಯಿದೆ. ಇದನ್ನು ಪಾಲಿಸಲಾಗುತ್ತಿದೆಯೇ? ಎಂಬುದನ್ನು ಪರೀಕ್ಷಿಸಿ, ಅನುಷ್ಠಾನಗೊಳಿಸುವ ಕಾರ್ಯ ಮಾಡಲಾಗುವುದು.

•  ಮೈಕ್ರೋ ಫೈನಾನ್ಸ್ ಗಳಿಂದ ಸಾಲ ಪಡೆಯುವವರ ಹಿತವನ್ನು ಕಾಪಾಡಲು ಸರ್ಕಾರ ಬದ್ಧವಾಗಿದೆ. ಸಾಲಗಾರರಿಗೆ ಕಿರುಕುಳ ನೀಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಾಲಗಾರರ ಹಿತವನ್ನು ಕಾಪಾಡುವ ದೃಷ್ಟಿಯಿಂದ ಆದಷ್ಟು ಬೇಗನೆ ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು ರಚನೆ.
• ಬಲವಂತದ ಸಾಲ ವಸೂಲಾತಿ ಮಾಡುವವರ ವಿರುದ್ದ ಕ್ರಿಮಿನಲ್ ಮೊಕದ್ದಮೆ, ಈ ಕುರಿತು ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲು ಸಾಧ್ಯವಾಗುವಂತೆ ಕಾನೂನಿನಲ್ಲಿ ಅವಕಾಶ ನೀಡಲಾಗುವುದು.

• ಈಗಿರುವ ಕಾನೂನು ಇನ್ನಷ್ಟು ಬಲಪಡಿಸಲು ಕ್ರಮವಹಿಸುತ್ತೇವೆ. ಇದರಲ್ಲಿ ಪೊಲೀಸರಿಗೆ ಹೆಚ್ಚಿನ ಅಧಿಕಾರ ನೀಡಲು ಕ್ರಮ. ನೋಂದಣಿಯಾಗದ ಲೇವಾದೇವಿಗಾರರ ಮೇಲೆ ನಿಯಂತ್ರಣಕ್ಕೆ ಹೊಸ ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗುವುದು ಎಂದಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular