GOOD NEWS : ಶೀಘ್ರವೇ ರಾಜ್ಯ ಸರ್ಕಾರದಿಂದ ನರ್ಸ್’ ಗಳ ವೇತನ ಹೆಚ್ಚಳ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿರುವ NHM ಯೋಜನೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನರ್ಸ್ ಸಿಬ್ಬಂದಿ ಪ್ರತಿನಿಧಿಗಳು ಆರೋಗ್ಯ ಸೌಧದಲ್ಲಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದರು.

ನರ್ಸ್ ಸಂಘಟನೆಯ ಪ್ರತಿನಿಧಿಗಳ ಅಹವಾಲುಗಳನ್ನ ಆಲಿಸಿದ ಸಚಿವರು ವೇತನ ಹೆಚ್ಚಳ ಕುರಿತು ಪರಿಶೀಲನೆ ನಡೆಸುವುದಾಗಿ ಭರವಸೆ ನೀಡಿದರು.

NHM ಯೋಜನೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಪಾಲುದಾರಿಕೆಯಿಂದ ನಡೆಯುತ್ತಿದ್ದು, ವೇತನ ಹೆಚ್ಚಳ ಕುರಿತಂತೆ ಕೇಂದ್ರ ಸರ್ಕಾರಕ್ಕೂ ಪ್ರಸ್ತಾವನೆ ಸಲ್ಲಿಸಿ ಅನುಮೋದನೆ ಪಡೆಯಬೇಕಾಗುತ್ತದೆ. ಈ ಬಗ್ಗೆ ಸಭೆ ಕರೆದು ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು.ನರ್ಸ್ ನೇಮಕಾತಿ ವೇಳೆ NHM ಅಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಕೃಪಾಂಕ ನೀಡುವ ಬಗ್ಗೆ ತೀರ್ಮಾನಿಸಲಾಗುವುದು. ಇದರೊಂದಿಗೆ ಅಂತರ್ ಜಿಲ್ಲಾ ವರ್ಗಾವಣೆಗೆ ಒಂದು ಬಾರಿ ಅವಕಾಶ ಕಲ್ಪಿಸಲಾಗುವುದು.

ಈ ವೇಳೆ ಪ್ರತಿಭಟನೆ ಹಿಂಪಡೆಯುವ ಕುರಿತು ಪ್ರತಿಭಟನಾ ನಿರತ ನರ್ಸ್ ಗಳೊಂದಿಗೆ ಚರ್ಚಿಸಿ ನಾಳೆಯೊಳಗೆ ನಿರ್ಧಾರ ಪ್ರಕಟಿಸುವುದಾಗಿ ಸಂಘಟನೆಯ ಪ್ರತಿನಿಧಿಗಳು ತಿಳಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read