BIG NEWS : ‘SSLC’ ಪರೀಕ್ಷೆ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಯಾವುದೇ ಬದಲಾವಣೆ ಇಲ್ಲ : ಪರೀಕ್ಷಾ ಮಂಡಳಿ ಸ್ಪಷ್ಟನೆ.!

ಬೆಂಗಳೂರು : ಎಸ್.ಎಸ್.ಎಲ್.ಸಿ ಪರೀಕ್ಷೆಯ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಯಾವುದೇ ಬದಲಾವಣೆ ಇಲ್ಲ, ವಿದ್ಯಾರ್ಥಿಗಳು ಯಾವುದೇ ರೀತಿಯ ಗೊಂದಲ ಹಾಗೂ ಆತಂಕ ಪಡಬಾರದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧ್ಯಕ್ಷರು ಸ್ಪಷ್ಠೀಕರಣ ನೀಡಿದ್ದಾರೆ.

2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು ಮಹತ್ವದ ಬದಲಾವಣೆ ಮಾಡಿರುವುದಾಗಿ ದಿನಪತ್ರಿಕೆಗಳಲ್ಲಿ ಸುದ್ದಿ ಪ್ರಕಟವಾಗಿರುತ್ತದೆ. ಆದರೆ 2024-25ನೇ ಸಾಲಿನ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಮಂಡಳಿಯು ಯಾವುದೇ ಬದಲಾವಣೆ ಮಾಡಿರುವುದಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಅಧ್ಯಕ್ಷರು ತಿಳಿಸಿದ್ದಾರೆ.

ಮುಂದಿನ ಶೈಕ್ಷಣಿಕ ವರ್ಷದಲ್ಲಿ ವಿಷಯ ತಜ್ಞರ ಸಮಿತಿ ರಚಿಸಿ, ಸದರಿ ಸಮಿತಿ ನೀಡುವ ವರದಿಯಂತೆ ಕ್ರಮವಹಿಸಲಾಗುವುದು. ಹಾಗಾಗಿ ಈ ಸಾಲಿನ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಯಾವುದೇ ಬದಲಾವಣೆ ಇಲ್ಲದೆ ಕಳೆದ ಸಾಲಿನಂತೆಯೇ ಮುಂದುವರಿಸಲಾಗಿದ್ದು, ಸದ್ಯದಲ್ಲೇ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಮಂಡಳಿಯ ಜಾಲತಾಣದಲ್ಲಿ ಪ್ರಕಟಿಸಲಾಗುವುದು.ಈ ಬಗ್ಗೆ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಯಾವುದೇ ಗೊಂದಲ ಹಾಗೂ ಆತಂಕಕ್ಕೆ ಒಳಗಾಗಬಾರದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧ್ಯಕ್ಷರು ಸ್ಪಷ್ಠೀಕರಣ ನೀಡಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read