ಬೆಂಗಳೂರು: ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಲಿರುವ ವಿಧಾನ ಮಂಡಲದ ಉಭಯ ಸದನಗಳಲ್ಲಿ ಹಲವು ವಿಧೇಯಕ ಮಂಡಿಸಲು ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಮುಂದಿನ ವಿಧಾನಮಂಡಲದ ಉಭಯ ಸದನಗಳಲ್ಲಿ ಮಂಡಿಸಲು ಅನುಮೋದನೆಗೊಂಡ ವಿಧೇಯಕಗಳಿವು
ಬಯಲು ಸೀಮೆ ಪ್ರದೇಶಾಭಿವೃದ್ಧಿ ಮಂಡಳಿ (ತಿದ್ದುಪಡಿ) ವಿಧೇಯಕ – 2025
ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ (ತಿದ್ದುಪಡಿ) ವಿಧೇಯಕ – 2025
ಕರ್ನಾಟಕ ಹಿಂದು ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ (ತಿದ್ದುಪಡಿ) ವಿಧೇಯಕ – 2025
ಶ್ರೀ ಚಾಮು೦ಡೇಶ್ವರಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರ ಮತ್ತು ಇತರೆ ಕಾನೂನುಗಳ (ತಿದ್ದುಪಡಿ) ವಿಧೇಯಕ – 2025
ಕರ್ನಾಟಕ ಒಳನಾಡು ನೌಕೆ ನಿಯಮಗಳು – 2025
ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ (ತಿದ್ದುಪಡಿ) ವಿಧೇಯಕ – 2025
ಕರ್ನಾಟಕ ಸಾಮಾಜಿಕ ಬಹಿಷ್ಕಾರ (ತಡೆಗಟ್ಟುವಿಕೆ, ನಿಷೇಧ ಮತ್ತು ಪರಿಹಾರ) ವಿಧೇಯಕ – 2025
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಂದಿನ ವಿಧಾನ ಮಂಡಲದ ಅಧಿವೇಶನದಲ್ಲಿ ಉಭಯ ಸದನಗಳ ಮುಂದೆ ಮಂಡಿಸಲು ಅನುಮೋದನೆಗೊಂಡ ವಿಧೇಯಕಗಳಿವು..#CabinetDecisions pic.twitter.com/J98TQqDDr1
— DIPR Karnataka (@KarnatakaVarthe) December 4, 2025
