ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಇಂದು ಬೂಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಭಾನು ಮುಷ್ತಾಕ್ ಚಾಲನೆ ನೀಡಲಿದ್ದಾರೆ.
ಸೋಮವಾರ ಬೆಳಗ್ಗೆ 10 ಗಂಟೆ 10 ನಿಮಿಷದಿಂದ 10 ಗಂಟೆ 40 ನಿಮಿಷದೊಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವರು, ಸಂಸದರು, ಶಾಸಕರು, ಗಣ್ಯರು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಇದೇ ಮೊದಲ ಬಾರಿಗೆ ದಸರಾ ಉದ್ಘಾಟನೆ ಕಾರ್ಯಕ್ರಮಕ್ಕೆ ಪಾಸ್ ಇದ್ದವರಿಗೆ ಮಾತ್ರ ಪ್ರವೇಶ ನೀಡಲಾಗುತ್ತಿದೆ. ಪ್ರತಿಭಟನೆ ಸಾಧ್ಯತೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ದಸರಾ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರನ್ನು ಬಣ್ಣ ಬಣ್ಣದ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ. ಈ ಬಾರಿ ದಸರಾ ಮಹೋತ್ಸವ 11 ದಿನ ನಡೆಯುತ್ತಿರುವುದು ವಿಶೇಷವಾಗಿದೆ.