HomeKarnatakaBIG NEWS : ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಮೂವರು ಬಲಿ

BIG NEWS : ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಮೂವರು ಬಲಿ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ಅಬ್ಬರ ಮತ್ತೆ ಶುರುವಾಗಿದ್ದು, ಮೂವರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಆರೋಗ್ಯ ಇಲಾಖೆ ಅಂಕಿ ಅಂಶಗಳ ಪ್ರಕಾರ, ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಈವರೆಗೆ ಮೂವರು ಸಾವನ್ನಪ್ಪಿದ್ದಾರೆ. ಡಿಸೆಂಬರ್‌ 18 ರಂದು ಚಾಮರಾಜ ಪೇಟೆಯಲಿ 64 ವರ್ಷದ ವೃದ್ಧರೊಬ್ಬರು ದೀರ್ಘಕಾಲಿನ ಅನಾರೋಗ್ಯದಿಂದ ಮೃತಪಟ್ಟಿದ್ದರು. ಜೊತೆಗೆ 44 ವರ್ಷದ ಹಾಗೂ 76 ವರ್ಷದ ಇಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿಸಿದೆ. ಈ ಮೂಲಕ ತೀವ್ರ ಆತಂಕ ಸೃಷ್ಟಿಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ ನಿನ್ನೆಹೊಸದಾಗಿ 22 ಜನರಿಗೆ ಸೋಂಕು ತಗುಲಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 92ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇಕಡ 2.47ರಷ್ಟು ಇದೆ. ಬೆಂಗಳೂರಿನಲ್ಲಿ ನಿನ್ನೆ 359 ಜನರಿಗೆ ಟೆಸ್ಟ್ ಮಾಡಲಾಗಿತ್ತು. ಬೆಂಗಳೂರು ನಗರದಲ್ಲಿ 19 ಜನರಿಗೆ ಕೋರೊನಾ ಸೋಂಕು ತಗುಲಿದೆ. ಬಳ್ಳಾರಿ 2, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಬ್ಬರಿಗೆ ಕೊರೋನಾ ಸೋಂಕು ತಗುಲಿದೆ.

For Latest News Updates, Join Our Whatsapp Community🚩
RELATED ARTICLES

Most Popular