HomeKarnatakaBIG NEWS : 2022 ರಲ್ಲೇ 'ಹುಲಿ ಚರ್ಮ' ಅರಣ್ಯ ಇಲಾಖೆಗೆ ಹಿಂದಿರುಗಿಸಲಾಗಿದೆ : ವಿನಯ್...

BIG NEWS : 2022 ರಲ್ಲೇ ‘ಹುಲಿ ಚರ್ಮ’ ಅರಣ್ಯ ಇಲಾಖೆಗೆ ಹಿಂದಿರುಗಿಸಲಾಗಿದೆ : ವಿನಯ್ ಗುರೂಜಿ ಆಶ್ರಮದಿಂದ ಸ್ಪಷ್ಟನೆ

ಬೆಂಗಳೂರು : 2022ರಲ್ಲೇ ಹುಲಿ ಚರ್ಮ ಅರಣ್ಯ ಇಲಾಖೆಗೆ ಹಿಂದಿರುಗಿಸಲಾಗಿದೆ ಎಂದು ವಿನಯ್ ಗುರೂಜಿ ಆಶ್ರಮದಿಂದ ಸ್ಪಷ್ಟನೆ ನೀಡಲಾಗಿದೆ.

ವಿನಯ್ ಗುರೂಜಿ ಅವರು ಹುಲಿ ಚರ್ಮದ ಮೇಲೆ ಕುಳಿತಿದ್ದಾರೆ ಎಂದು ಆರೋಪಿಸಿ ಸರ್ವ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಶಿವಕುಮಾರ್ ನೇತೃತ್ವದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ದೂರು ನೀಡಲಾಗಿತ್ತು.

ಈ ಹಿನ್ನೆಲೆ ವಿನಯ್ ಗುರೂಜಿ ಆಶ್ರಮದಿಂದ ಸ್ಪಷ್ಟನೆ ನೀಡಲಾಗಿದ್ದು, 2 ವರ್ಷದ ಹಿಂದೆ ಶಿವಮೊಗ್ಗ ಮೂಲದ ಅಮರೇಂದ್ರ ಕಿರೀಟಿ ಎಂಬವರು ವಿನಯ್ ಗುರೂಜಿಗೆ ಹುಲಿ ಚರ್ಮವನ್ನು ಉಡುಗೊರೆ ಯಾಗಿ ನೀಡಿದ್ದರು. ಕಿರೀಟಿಯವರು ಅರಣ್ಯ ಅಧಿಕಾರಿಗಳ ಅನುಮತಿ ಪಡೆದು ಉಡುಗೊರೆ ನೀಡಿದ್ದರು ಎಂದು ಸ್ಪಷ್ಟನೆ ನೀಡಲಾಗಿದೆ.
ಅವಧೂತ ವಿನಯ್ ಗುರೂಜಿ ಹುಲಿ ಚರ್ಮದ ಮೇಲೆ ಕೂತಿರೋ ಫೋಟೋ ವೈರಲ್ ಆಗಿದ್ದು, ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ದೂರು ನೀಡಲಾಗಿದೆ. ಇದಲ್ಲದೇ ಹುಲಿ ಉಗುರು ಧರಿಸಿದ ನಟ ದರ್ಶನ್, ಜಗ್ಗೇಶ್ ವಿರುದ್ಧ ಕೂಡ ಕ್ರಮಕ್ಕೆ ಆಗ್ರಹಿಸಿ ದೂರು ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular