ಬೆಂಗಳೂರು : ಕರ್ನಾಟಕ ಲೋಕ ಸೇವಾ ಆಯೋಗವು ಉಲ್ಲೇಖಿತ ಪತ್ರದಲ್ಲಿ ದಿನಾಂಕ:15.03.2024 ರಂದು ಅಧಿಸೂಚಿಸಿರುವ ವಿವಿಧ ಇಲಾಖೆಯಲ್ಲಿನ ಗ್ರೂಪ್-ಸಿ ಹುದ್ದೆಗಳಿಗೆ ಸಂಬಂಧಿಸಿದಂತೆ ದಿನಾಂಕ: 12-07-2025 ಕನ್ನಡ ಭಾಷಾ ಪರೀಕ್ಷೆ ಮತ್ತು 13-07-2025 ರಂದು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬೆಂಗಳೂರು, ಕಲಬುರಗಿ, ಬೆಳಗಾವಿ, ಮೈಸೂರು ಮತ್ತು ಶಿವಮೊಗ್ಗ ಕೇಂದ್ರದಲ್ಲಿನ ವಿವಿಧ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳನ್ನು ಗುರುತಿಸಿ, ನಡೆಸಲು ಉದ್ದೇಶಿಸಿರುತ್ತಾರೆ.
ತತ್ಸಂಬಂಧವಾಗಿ ಉಲ್ಲೇಖಿತ ಪತ್ರವನ್ನು ಈ ಸುತ್ತೋಲೆಯೊಂದಿಗೆ ಲಗತ್ತಿಸಲಾಗಿದ್ದು, ಮೇಲ್ಕಂಡ ದಿನಾಂಕಗಳಂದು ಲಗತ್ತಿಸಿರುವ ಅನುಬಂಧದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಇತರೆ ಯಾವುದೇ ಪರೀಕ್ಷಾ/ಕಾರ್ಯಕ್ರಮಗಳನ್ನು ನಿಗಧಿಪಡಿಸದೆ ಕರ್ನಾಟಕ ಲೋಕ ಸೇವಾ ಆಯೋಗದ ವತಿಯಿಂದ ನಡೆಯಲಿರುವ ಗ್ರೂಪ್- ಸಿ ವೃಂದದ ಹುದ್ದೆಗಳ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕಾಲೇಜಿನ ಕಟ್ಟಡ/ ಕೊಠಡಿಗಳನ್ನು ಹಾಗೂ ಇತರೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ನೀಡಿ, ಉಪನ್ಯಾಸಕರು/ಸಿಬ್ಬಂದಿಗಳು ಮೇಲ್ಕಂಡ ದಿನಾಂಕಗಳಂದು ನಿಯೋಜಿಸಿರುವ ಪರೀಕ್ಷಾ ಕಾರ್ಯಗಳನ್ನು ಕಡ್ಡಾಯವಾಗಿ ನಿರ್ವಹಿಸುವಂತೆ ಹಾಗೂ ಕಾಲೇಜುಗಳ ಮುಖಸ್ಥರ ನೆರವಿನೊಂದಿಗೆ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಲು ಸಹಕರಿಸುವಂತೆ ಸೂಚಿಸಲಾಗಿದೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ. ಆಯೋಗವು ದಿನಾಂಕ 15-03-2024 ರಂದು ಪದವಿ ಮಟ್ಟದ ವಿವಿಧ ಇಲಾಖೆಗಳಲ್ಲಿನ ವಿವಿಧ ಗ್ರೂಪ್ ಸಿ -60 ಉಳಿಕೆ ಮೂಲ ವೃಂದದ ಹುದ್ದೆಗಳಿಗೆ ದಿನಾಂಕ:12-07-2025ರಂದು ಕನ್ನಡ ಭಾಷಾ ಪರೀಕ್ಷೆ ಮತ್ತು 13-07-2025ರಂದು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬೆಂಗಳೂರು, ಕಲಬುರಗಿ, ಬೆಳಗಾವಿ, ಮೈಸೂರು ಮತ್ತು ಶಿವಮೊಗ್ಗ ಕೇಂದ್ರಗಳಲ್ಲಿ ನಡೆಸಲಾಗುತ್ತಿದೆ.
ಸದರಿ ಪರೀಕ್ಷೆಗಳನ್ನು ಈ ಪತ್ರದೊಂದಿಗೆ ಲಗತ್ತಿಸಿರುವ ವಿವಿಧ ಸರ್ಕಾರಿ ಪದವಿ ಕಾಲೇಜುಗಳಲ್ಲಿ ನಡೆಸಲಾಗುತ್ತಿದ್ದು, ಸದರಿ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಉಪನ್ಯಾಸಕರು / ಸಿಬ್ಬಂದಿಗಳು ಮೇಲ್ಕಂಡ ದಿನಾಂಕಗಳಂದು ನಿಯೋಜಿಸುವ ಪರೀಕ್ಷಾ ಕಾರ್ಯಗಳನ್ನು ಕಡ್ಡಾಯವಾಗಿ ನಿರ್ವಹಿಸುವಂತೆ ಸಂಬಂಧಿತ ಪದವಿ ಕಾಲೇಜುಗಳ ಮುಖ್ಯಸ್ಥರುಗಳಿಗೆ ಕೂಡಲೇ ನಿರ್ದೇಶನ ನೀಡಬೇಕೆಂದು ಕೋರಿದೆ.











