HomeLatest NewsBIG NEWS: ಶಾಸಕರ ಶಿಫಾರಸು ಆಧರಿಸಿದ ವರ್ಗಾವಣೆ ಅಮಾನ್ಯವಲ್ಲ: ಹೈಕೋರ್ಟ್ ಆದೇಶ

BIG NEWS: ಶಾಸಕರ ಶಿಫಾರಸು ಆಧರಿಸಿದ ವರ್ಗಾವಣೆ ಅಮಾನ್ಯವಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಶಾಸಕರ ಶಿಫಾರಸು ಆಧರಿಸಿದ ವರ್ಗಾವಣೆ ಅಮಾನ್ಯವಲ್ಲ ಎಂದು ಹೈಕೋರ್ಟ್ ಹೇಳಿದೆ. ತಹಶೀಲ್ದಾರ್ ಎಸ್. ವೆಂಕಟೇಶಪ್ಪ ವರ್ಗಾವಣೆ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.

ಬಂಗಾರಪೇಟೆ ಶಾಸಕರ ಶಿಫಾರಸಿನಂತೆ ವರ್ಗಾವಣೆ ಮಾಡಲಾಗಿತ್ತು. ವರ್ಗಾವಣೆ ರದ್ದುಪಡಿಸಲು ಕೆಎಟಿ ಕೂಡ ನಿರಾಕರಿಸಿತ್ತು. ಹೀಗಾಗಿ ವೆಂಕಟೇಶಪ್ಪ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ನಿಯಮದಂತೆ ವರ್ಗಾವಣೆಗೆ ಮುಖ್ಯಮಂತ್ರಿಗಳ ಅನುಮತಿ ಪಡೆಯಲಾಗಿದೆ. ಸ್ಥಳೀಯ ನಿವಾಸಿಗಳು ದೂರಿದ್ದರಿಂದ ವರ್ಗಾವಣೆ ಮಾಡಲಾಗಿದೆ ಎಂಬ ಸರ್ಕಾರದ ವಾದವನ್ನು ಒಪ್ಪಿದ ಹೈಕೋರ್ಟ್ ವರ್ಗಾವಣೆಯನ್ನು ಎತ್ತಿ ಹಿಡಿದಿದೆ.

ವಿಶೇಷ ಸಂದರ್ಭಗಳಲ್ಲಿ ಸಿಎಂ ಸಮ್ಮತಿಯೊಂದಿಗೆ ವರ್ಗಾವಣೆಗೆ ಅವಕಾಶವಿದೆ ಎಂದು ನ್ಯಾಯಮೂರ್ತಿ ಎಸ್‌.ಜಿ. ಪಂಡಿತ್ ಮತ್ತು ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರಿದ್ದ ಪೀಠ ಅಭಿಪ್ರಾಯಪಟ್ಟಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular