ಬೆಂಗಳೂರು: ಖಾಸಗಿ ಬಸ್ ಮಾಲೀಕರ ಜೊತೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಹತ್ವದ ಸಭೆ ನಡೆಸಿ ಖಡಕ್ ಸೂಚನೆ ನೀಡಿದ್ದಾರೆ.
ಖಾಸಗಿ ಬಸ್ ಗಳಲ್ಲಿ ಇನ್ನು ಮುಂದೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು, ನಿಯಮ ಪಾಲಿಸಲು, ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ರೋಡ್ ಟ್ರಾನ್ಸ್ಪೋರ್ಟ್ ನಿಯಮಗಳನ್ನು ಜಾರಿಗೊಳಿಸಲು ಸೂಚನೆ ನೀಡಿದ್ದಾರೆ.
ಇನ್ನು ಮುಂದೆ ಸ್ಲೀಪರ್ ಬಸ್ ಗಳಲ್ಲಿ ಎಂಟು ನಿಯಮಗಳ ಪಾಲನೆ ಕಡ್ಡಾಯವಾಗಿದೆ.
ಸ್ಲೀಪರ್ ಬಸ್ ಗಳಲ್ಲಿ ಚಾಲಕರ ಹಿಂಬದಿಯ ಡೋರ್ ತೆಗೆಯಬೇಕು.
ಸ್ಲೀಪರ್ ಬರ್ತ್ ಗಳಲ್ಲಿ ಸ್ಲೈಡರ್ ತೆಗೆಯಬೇಕು.
ಫೈಯರ್ ಡಿಟೆಕ್ಷನ್ ಅನ್ನು ತಿಂಗಳೊಳಗೆ ಕಡ್ಡಾಯವಾಗಿ ಅಳವಡಿಸಬೇಕು.
10 ಕೆಜಿ ತೂಕದ ಅಗ್ನಿಶಾಮಕ ಸಾಧನ ಅಳವಡಿಸುವುದು ಕಡ್ಡಾಯ.
ಚಾಸಿಸ್ ಅನಧಿಕೃತ ವಿಸ್ತರಣೆಗೆ ಬ್ರೇಕ್ ಹಾಕಲಾಗಿದೆ.
ಅನುಮೋದಿತ ಟೆಸ್ಟಿಂಗ್ ಏಜೆನ್ಸಿಯಿಂದ ಪ್ರಮಾಣ ಪತ್ರ ಕಡ್ಡಾಯವಾಗಿ ಪಡೆದುಕೊಳ್ಳಬೇಕು.
ಪ್ರಯಾಣಿಕರ ಸೇಫ್ಟಿ ಮಾನದಂಡ ಇದ್ದರೆ ಮಾತ್ರ ಎಫ್.ಸಿ. ಮಾಡಬೇಕು.
ಬಸ್ ಕವಚ ನಿರ್ಮಾಣ ಸಂಸ್ಥೆ ಸಿಂಧುತ್ವ ಪರಿಶೀಲಿಸಿದ ನಂತರವೇ ನೋಂದಣಿ ಮಾಡಲಾಗುವುದು ಎಂದು ಸಭೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಖಡಕ್ ಸೂಚನೆ ನೀಡಿದ್ದಾರೆ.
ಚಿತ್ರದುರ್ಗದಲ್ಲಿ ಖಾಸಗಿ ಬಸ್ ನಲ್ಲಿ ಅಗ್ನಿ ದುರಂತ ಪ್ರಕರಣ ಹಾಗೂ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸೂಚನೆ ಹಿನ್ನೆಲೆಯಲ್ಲಿ ಸಭೆ ಕರೆದಿದ್ದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಖಾಸಗಿ ಬಸ್ ಮಾಲೀಕರಿಗೆ ಖಡಕ್ ಸೂಚನೆ ನೀಡಿದ್ದಾರೆ. ಖಾಸಗಿ ಬಸ್ ಮಾಲೀಕರು ಮತ್ತು ಬಸ್ ಕವಚ ನಿರ್ಮಾಣ ಕಂಪನಿ ಮಾಲೀಕರು, ಸಾರಿಗೆ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು. ರಾಜ್ಯ ಸಾರಿಗೆ ಇಲಾಖೆಯ ಮುಖ್ಯ ಕಚೇರಿಯಲ್ಲಿ ಮಹತ್ವದ ಸಭೆ ನಡೆಸಲಾಗಿದೆ.

