ನವದೆಹಲಿ: ಸೌರಶಕ್ತಿ ಮತ್ತು ಸುಸ್ಥಿರ ಪ್ರಗತಿಯನ್ನು ಹೆಚ್ಚಿಸುವ ಪ್ರಯತ್ನದಲ್ಲಿ, ತಮ್ಮ ಸರ್ಕಾರವು ‘ಪಿಎಂ ಸೂರ್ಯ ಘರ್: ಮುಫ್ಟ್ ಬಿಜ್ಲಿ ಯೋಜನೆ’ ಅನ್ನು ಪ್ರಾರಂಭಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಘೋಷಿಸಿದರು.
ಸುಸ್ಥಿರ ಅಭಿವೃದ್ಧಿ ಮತ್ತು ಜನರ ಯೋಗಕ್ಷೇಮಕ್ಕಾಗಿ, ನಾವು ಪಿಎಂ ಸೂರ್ಯ ಘರ್: ಮುಫ್ಟ್ ಬಿಜ್ಲಿ ಯೋಜನೆಯನ್ನು ಪ್ರಾರಂಭಿಸುತ್ತಿದ್ದೇವೆ. 75,000 ಕೋಟಿ ರೂ.ಗಳ ಹೂಡಿಕೆಯ ಈ ಯೋಜನೆಯು ಪ್ರತಿ ತಿಂಗಳು 300 ಯೂನಿಟ್ ವರೆಗೆ ಉಚಿತ ವಿದ್ಯುತ್ ಒದಗಿಸುವ ಮೂಲಕ 1 ಕೋಟಿ ಮನೆಗಳನ್ನು ಬೆಳಗಿಸುವ ಗುರಿಯನ್ನು ಹೊಂದಿದೆ” ಎಂದು ಪ್ರಧಾನಿ ಹೇಳಿದರು.
https://twitter.com/narendramodi/status/1757308777466937378?ref_src=twsrc%5Etfw%7Ctwcamp%5Etweetembed%7Ctwterm%5E1757308777466937378%7Ctwgr%5E00794661b80f5824d3fe1735867009a2dbce413b%7Ctwcon%5Es1_&ref_url=https%3A%2F%2Fwww.ndtv.com%2Findia-news%2Fpm-narendra-modi-launches-mega-muft-bijli-free-electricity-scheme-shares-link-to-join-5048978
ಜನರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ನೀಡಲಾಗುವ ಗಣನೀಯ ಸಬ್ಸಿಡಿಗಳಿಂದ ಹಿಡಿದು ಭಾರಿ ರಿಯಾಯಿತಿಯ ಬ್ಯಾಂಕ್ ಸಾಲಗಳವರೆಗೆ, ಕೇಂದ್ರ ಸರ್ಕಾರವು ಜನರ ಮೇಲೆ ಯಾವುದೇ ವೆಚ್ಚದ ಹೊರೆಯಾಗದಂತೆ ನೋಡಿಕೊಳ್ಳುತ್ತದೆ ಎಂದು ಅವರು ಹೇಳಿದರು.
ಈ ಯೋಜನೆಯನ್ನು ತಳಮಟ್ಟದಲ್ಲಿ ಜನಪ್ರಿಯಗೊಳಿಸುವ ಸಲುವಾಗಿ, ನಗರ ಸ್ಥಳೀಯ ಸಂಸ್ಥೆಗಳು ಮತ್ತು ಪಂಚಾಯತ್ಗಳು ತಮ್ಮ ವ್ಯಾಪ್ತಿಯಲ್ಲಿ ಮೇಲ್ಛಾವಣಿ ಸೌರ ವ್ಯವಸ್ಥೆಗಳನ್ನು ಉತ್ತೇಜಿಸಲು ಪ್ರೋತ್ಸಾಹಿಸಬೇಕು ಎಂದು ಮೋದಿ ಹೇಳಿದರು.ಈ ಯೋಜನೆಯು ಹೆಚ್ಚಿನ ಆದಾಯ, ಕಡಿಮೆ ವಿದ್ಯುತ್ ಬಿಲ್ ಗಳು ಮತ್ತು ಜನರಿಗೆ ಉದ್ಯೋಗ ಸೃಷ್ಟಿಗೆ ಕಾರಣವಾಗುತ್ತದೆ” ಎಂದು ಪ್ರಧಾನಿ ಹೇಳಿದರು.