HomeLatest NewsBIG NEWS: ಪಠ್ಯದಲ್ಲಿ ವಾಲ್ಮೀಕಿ ಜೀವನ ಚರಿತ್ರೆ, ರಾಮಾಯಣ ಸೇರ್ಪಡೆ: ಸಿಎಂ ಸಿದ್ದರಾಮಯ್ಯ

BIG NEWS: ಪಠ್ಯದಲ್ಲಿ ವಾಲ್ಮೀಕಿ ಜೀವನ ಚರಿತ್ರೆ, ರಾಮಾಯಣ ಸೇರ್ಪಡೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಾಲ್ಮೀಕಿ ಜೀವನ ಚರಿತ್ರೆ ಮತ್ತು ರಾಮಾಯಣವನ್ನು ಪಠ್ಯದಲ್ಲಿ ಸೇರಿಸುವ ಬೇಡಿಕೆಯನ್ನು ಸಕಾರಾತ್ಮಕವಾಗಿ ಪರಿಗಣಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ವಾಲ್ಮೀಕಿ ಜಯಂತಿ ಪ್ರಯುಕ್ತ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಮೊದಲು ಮಾತನಾಡಿದ ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಅವರು, ವಾಲ್ಮೀಕಿ ಜೀವನ ಚರಿತ್ರೆ ಮತ್ತು ರಾಮಾಯಣವನ್ನು ಪಠ್ಯದಲ್ಲಿ ಸೇರಿಸಬೇಕೆಂದು ಮನವಿ ಮಾಡಿದರು. ಇದಕ್ಕೆ ಭಾಷಣದಲ್ಲಿ ಪ್ರತಿಕ್ರಿಯೆ ನೀಡಿದ ಸಿಎಂ, ಪಠ್ಯದಲ್ಲಿ ವಾಲ್ಮೀಕಿ ಜೀವನ ಚರಿತ್ರೆ ಮತ್ತು ರಾಮಾಯಣ ಸೇರಿಸುವುದಾಗಿ ಭರವಸೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪರಿಶಿಷ್ಟ ಜಾತಿ ಪಂಗಡದವರಿಗೆ ಜನಸಂಖ್ಯೆ ಪ್ರಮಾಣದಷ್ಟೇ ಅಭಿವೃದ್ಧಿಗೆ ಬಜೆಟ್ ನಲ್ಲಿ ಹಣ ಮೀಸಲಿಡಲು ಕಾಯಿದೆ ರೂಪಿಸಿದ್ದು ಕಾಂಗ್ರೆಸ್ ಸರ್ಕಾರ. ಅಧಿಕಾರದಲ್ಲಿದ್ದಾಗ ನಿಮ್ಮ ಪರವಾಗಿ ಯಾರು ಇದ್ದಾರೋ ಅವರ ಪರವಾಗಿ ವಾಲ್ಮೀಕಿ ಸಮುದಾಯ ಗಟ್ಟಿಯಾಗಿ ನಿಲ್ಲಬೇಕೆಂದು ಸಿಎಂ ಮನವಿ ಮಾಡಿದ್ದಾರೆ.

ವಾಲ್ಮೀಕಿ ಪ್ರಶಸ್ತಿ ಪುರಸ್ಕೃತರಿಗೆ ತಲಾ ಐದು ಲಕ್ಷ ನಗದು, ಚಿನ್ನದ ಪದಕ ಪ್ರದಾನ ಮಾಡಿ ಗೌರವಿಸಲಾಯಿತು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular