HomeIndiaBIG NEWS: ತಮಿಳುನಾಡು, ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಇಂದು ಮತದಾನ

BIG NEWS: ತಮಿಳುನಾಡು, ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಇಂದು ಮತದಾನ

ನವದೆಹಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಹಂತ 1 ಗುರುವಾರ ನಡೆಯಲಿದೆ. ತಮಿಳುನಾಡು ವಿಧಾನಸಭೆಗೆ ಏಕ ಹಂತದಲ್ಲಿ ಇಂದು ಚುನಾವಣೆ ನಡೆಯಲಿದೆ.

ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ 234 ಸ್ಥಾನಗಳಿಗೆ 5.73 ಕೋಟಿಗೂ ಹೆಚ್ಚು ಮತದಾರರು 4023 ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿದ್ದಾರೆ. ಡಿಎಂಕೆ -ಕಾಂಗ್ರೆಸ್ ಮೈತ್ರಿಕೂಟ, ಅಣ್ಣಾ ಡಿಎಂಕೆ- ಬಿಜೆಪಿ ಮೈತ್ರಿಕೂಟ ಮತ್ತು ವಿಜಯ್ ಅವರ ಟಿವಿಕೆ ಮಧ್ಯ ತ್ರಿಕೋನ ಸ್ಪರ್ಧೆ ಇದೆ.

ಪಶ್ಚಿಮ ಬಂಗಾಳದ 294 ಸ್ಥಾನಗಳ ಪೈಕಿ 152 ಸ್ಥಾನಗಳಿಗೆ ಇಂದು ಮತದಾನ ನಡೆಯಲಿದೆ. ಟಿಎಂಸಿ ಮತ್ತು ಬಿಜೆಪಿ ನಡುವೆ ನೇರ ಸ್ಪರ್ಧೆ ಇದೆ. ಕಾಂಗ್ರೆಸ್, ಎಡರಂಗ ಕೂಡ ಪ್ರಬಲ ಪೈಪೋಟಿ ನೀಡಿವೆ. 1.75 ಕೋಟಿ ಮಹಿಳೆಯರು ಸೇರಿದಂತೆ 3.60 ಕೋಟಿ ಹೆಚ್ಚು ಮತದಾರರು ಮತದಾನಕ್ಕೆ ಅರ್ಹರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಚುನಾವಣೆ ಏಪ್ರಿಲ್ 29ರಂದು ನಡೆಯಲಿದೆ. ತಮಿಳುನಾಡು ಪಶ್ಚಿಮ ಬಂಗಾಳ ಸೇರಿದಂತೆ ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶಗಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ಮೇ 4 ರಂದು ನಡೆಯಲಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular