ಹಾಸನ : ಪ್ರಿಯಕರನ ಜೊತೆ ಪತ್ನಿ ಪರಾರಿಯಾದ ಹಿನ್ನೆಲೆ ಮನನೊಂದು ನದಿಗೆ ಹಾರಿ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರದ ಮಾಕವಳ್ಳಿ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದವರನ್ನು ಗ್ರಾಮದ ರವಿ (38) ಎಂದು ಗುರುತಿಸಲಾಗಿದೆ.ರವಿ ಪತ್ನಿ ಕೆಲವು ದಿನಗಳ ಹಿಂದೆ ಗಂಡನನ್ನು ಬಿಟ್ಟು ಮಗುವಿನೊಂದಿಗೆ ಗ್ರಾಮದ ಪ್ರದೀಪ್ ಜೊತೆ ಪರಾರಿಯಾಗಿದ್ದಳು. ಈ ಸಂಬಂಧ ಪೊಲೀಸರಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಮನನೊಂದ ರವಿ ಹೇಮಾವತಿ ನದಿಗೆ ಹಾರಿ ಸೂಸೈಡ್ ಮಾಡಿಕೊಂಡಿದ್ದಾರೆ.