HomeKarnatakaBIG NEWS : ವಿಶ್ವವಿಖ್ಯಾತ 'ಮೈಸೂರು ದಸರಾ' ಮಹೋತ್ಸವಕ್ಕೆ ನಾಳೆ ವಿಧ್ಯುಕ್ತ ಚಾಲನೆ |Mysore Dasara...

BIG NEWS : ವಿಶ್ವವಿಖ್ಯಾತ ‘ಮೈಸೂರು ದಸರಾ’ ಮಹೋತ್ಸವಕ್ಕೆ ನಾಳೆ ವಿಧ್ಯುಕ್ತ ಚಾಲನೆ |Mysore Dasara 2024

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ನಾಳೆ ವಿಧ್ಯುಕ್ತ ಚಾಲನೆ ಸಿಗಲಿದೆ. ಈಗಾಗಲೇ ಅರಮನೆ ನಗರಿ ಮೈಸೂರು ಪ್ರವಾಸಿಗರಿಂದ ತುಂಬಿ ತುಳುಕುತ್ತಿದೆ.

ಅಕ್ಟೋಬರ್ 3ರಂದು ಚಾಮುಂಡಿಬೆಟ್ಟದಲ್ಲಿ ಬೆಳಗ್ಗೆ 9.15 ರಿಂದ 9.45ರ ನಡುವೆ ವೃಶ್ಚಿಕ ಲಗ್ನದಲ್ಲಿ ಸಾಹಿತಿ ಹಂ.ಪ.ನಾಗರಾಜಯ್ಯ ಅವರು ದಸರಾ ಉದ್ಘಾಟಿಸಲಿದ್ದಾರೆ.

ಅಕ್ಟೋಬರ್ 3 ರಿಂದ 11ರವರೆಗೂ ಅರಮನೆಯಲ್ಲಿ ಖಾಸಗಿ ದರ್ಬಾರ್ ನಡೆಯಲಿದ್ದು, ಅಕ್ಟೋಬರ್ 12ರ ಶನಿವಾರ ಜಂಬೂ ಸವಾರಿ ನಡೆಯಲಿದೆ. ಮಧ್ಯಾಹ್ನ 1.41 ರಿಂದ 2.10ರ ನಡುವೆ ಶುಭ ಮಕರ ಲಗ್ನದಲ್ಲಿ ನಂದಿ ಧ್ವಜಪೂಜೆ ನೆರವೇರಲಿದೆ. ಸಂಜೆ 4 ಗಂಟೆಯಿಂದ 4.30ರ ನಡುವೆ ಕುಂಭ ಲಗ್ನದಲ್ಲಿ ವಿಜಯದಶಮಿ ಮೆರವಣಿಗೆ (ಜಂಬೂ ಸವಾರಿ)ಗೆ ಚಾಲನೆ ದೊರೆಯಲಿದೆ. ಸಂಜೆ 7ಗಂಟೆಗೆ ಬನ್ನಿಮಂಟಪ ಆವರಣದಲ್ಲಿ ಪಂಜಿನ ಕವಾಯತು ನಡೆಯಲಿದೆ. ಪಂಜಿನ ಕವಾಯತ್ ನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಉದ್ಘಾಟಿಸಲಿದ್ದಾರೆ. ಅಂದು ದಸರಾ ಉದ್ಘಾಟನೆ, ವಸ್ತುಪ್ರದರ್ಶನ, ದಸರಾ ಕ್ರೀಡಾ ಉತ್ಸವ ಉದ್ಘಾಟನೆ, ಕುಸ್ತಿ ಪಂದ್ಯಾವಳಿ, ಸಾಂಸ್ಕೃತಿಕ ಕಾರ್ಯಕ್ರಮ, ಸಿನಿಮೋತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುವುದು.
ಕ್ಟೋಬರ್ 3 ರಿಂದ 11ರವರೆಗೂ ಅರಮನೆಯಲ್ಲಿ ಖಾಸಗಿ ದರ್ಬಾರ್ ನಡೆಯಲಿದೆ. ಅಕ್ಟೋಬರ್ 12ರ ಶನಿವಾರ ಜಂಬೂ ಸವಾರಿ ನಡೆಯಲಿದೆ. ಮಧ್ಯಾಹ್ನ 1.41 ರಿಂದ 2.10ರ ನಡುವೆ ಶುಭ ಮಕರ ಲಗ್ನದಲ್ಲಿ ನಂದಿ ಧ್ವಜಪೂಜೆ ನೆರವೇರಲಿದೆ. ಸಂಜೆ 4 ಗಂಟೆಯಿಂದ 4.30ರ ನಡುವೆ ಕುಂಭ ಲಗ್ನದಲ್ಲಿ ವಿಜಯದಶಮಿ ಮೆರವಣಿಗೆ ಜಂಬೂ ಸವಾರಿಗೆ ಚಾಲನೆ ದೊರೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಂದು ಸಂಜೆ 7ಗಂಟೆಗೆ ಬನ್ನಿಮಂಟಪ ಆವರಣದಲ್ಲಿ ಪಂಜಿನ ಕವಾಯತು ನಡೆಯಲಿದೆ. ಪಂಜಿನ ಕವಾಯತ್ ನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಭಾಗಿಯಾಗಲಿದ್ದಾರೆ.ಇನ್ನು ಯುವ ದಸರಾವನ್ನು ಮಾನಸಗಂಗೋತ್ರಿ ವಿಶ್ವವಿದ್ಯಾಲಯದ ಮುಕ್ತ ರಂಗಮಂದಿರದಲ್ಲಿ ಆಯೋಜಿಸಲಾಗಿದೆ. ಪ್ರತಿದಿನ ಸಂಜೆ 5 ಗಂಟೆಯಿಂದ ಕಾರ್ಯಕ್ರಮಗಳು ಪ್ರಾರಂಭವಾಗುತ್ತವೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular