BIG NEWS : ವಿಶ್ವವಿಖ್ಯಾತ ‘ಮೈಸೂರು ದಸರಾ’ ಮಹೋತ್ಸವದ ಅಧಿಕೃತ ಆಹ್ವಾನ ಪತ್ರಿಕೆ ಬಿಡುಗಡೆ, ಇಲ್ಲಿದೆ ಕಾರ್ಯಕ್ರಮದ ಸಂಪೂರ್ಣ ಪಟ್ಟಿ..!

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಅಕ್ಟೋಬರ್ 3ರಂದು ಚಾಮುಂಡಿಬೆಟ್ಟದಲ್ಲಿ ಬೆಳಗ್ಗೆ 9.15 ರಿಂದ 9.45ರ ನಡುವೆ ವೃಶ್ಚಿಕ ಲಗ್ನದಲ್ಲಿ ಸಾಹಿತಿ ಹಂ.ಪ.ನಾಗರಾಜಯ್ಯ ಅವರು ದಸರಾ ಉದ್ಘಾಟಿಸಲಿದ್ದಾರೆ.

ಅಕ್ಟೋಬರ್ 3 ರಿಂದ 11ರವರೆಗೂ ಅರಮನೆಯಲ್ಲಿ ಖಾಸಗಿ ದರ್ಬಾರ್ ನಡೆಯಲಿದ್ದು, ಅಕ್ಟೋಬರ್ 12ರ ಶನಿವಾರ ಜಂಬೂ ಸವಾರಿ ನಡೆಯಲಿದೆ. ಮಧ್ಯಾಹ್ನ 1.41 ರಿಂದ 2.10ರ ನಡುವೆ ಶುಭ ಮಕರ ಲಗ್ನದಲ್ಲಿ ನಂದಿ ಧ್ವಜಪೂಜೆ ನೆರವೇರಲಿದೆ. ಸಂಜೆ 4 ಗಂಟೆಯಿಂದ 4.30ರ ನಡುವೆ ಕುಂಭ ಲಗ್ನದಲ್ಲಿ ವಿಜಯದಶಮಿ ಮೆರವಣಿಗೆ (ಜಂಬೂ ಸವಾರಿ)ಗೆ ಚಾಲನೆ ದೊರೆಯಲಿದೆ. ಸಂಜೆ 7ಗಂಟೆಗೆ ಬನ್ನಿಮಂಟಪ ಆವರಣದಲ್ಲಿ ಪಂಜಿನ ಕವಾಯತು ನಡೆಯಲಿದೆ. ಪಂಜಿನ ಕವಾಯತ್ ನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಉದ್ಘಾಟಿಸಲಿದ್ದಾರೆ.

ದಸರಾ ಕಾರ್ಯಕ್ರಮದ ಅಧಿಕೃತ ಆಹ್ವಾನ ಪತ್ರಿಕೆ ಬಿಡುಗಡೆಯಾಗಿದ್ದು ಕಾರ್ಯಕ್ರಮದ ಸಂಪೂರ್ಣ ವಿವರವನ್ನು ನೀವು ವೀಕ್ಷಿಸಬಹುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read