HomeKarnatakaBIG NEWS: ಇಂದು ಯೋಗೀಶ್ ಗೌಡ ಹತ್ಯೆ ಕೇಸ್ ತೀರ್ಪು ಪ್ರಕಟ: ಶಾಸಕ ವಿನಯ್ ಕುಲಕರ್ಣಿ...

BIG NEWS: ಇಂದು ಯೋಗೀಶ್ ಗೌಡ ಹತ್ಯೆ ಕೇಸ್ ತೀರ್ಪು ಪ್ರಕಟ: ಶಾಸಕ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬುಧವಾರ ಅಂತಿಮ ತೀರ್ಪು ಪ್ರಕಟಿಸಲಿದೆ.

ಈ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 21 ಆರೋಪಿಗಳ ಭವಿಷ್ಯ ನಿರ್ಧಾರವಾಗಲಿದೆ. ಪ್ರಕರಣದ ವಿಚಾರಣೆಯನ್ನು ಪೂರ್ಣಗೊಳಿಸಿದ ನ್ಯಾಯಾಲಯ ಏಪ್ರಿಲ್ 9ರಂದು ತೀರ್ಪು ಪ್ರಕಟಿಸುವುದಾಗಿ ಹೇಳಿದ್ದು, ತಾಂತ್ರಿಕ ಕಾರಣ ಮತ್ತು ತೀರ್ಪು ಸಿದ್ಧಪಡಿಸುವ ಪ್ರಕ್ರಿಯೆ ಹಿನ್ನೆಲೆಯಲ್ಲಿ ಏಪ್ರಿಲ್ 15ಕ್ಕೆ ಮುಂದೂಡಲಾಗಿತ್ತು. ಬುಧವಾರ ನ್ಯಾಯಾಲಯ ತೀರ್ಪು ಪ್ರಕಟಿಸಲಿದ್ದು, ಆರೋಪಿಗಳಲ್ಲಿ ಆತಂಕ ಮೂಡಿದೆ.

ಧಾರವಾಡದ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಯೋಗೀಶ್ ಗೌಡ ಅವರನ್ನು 2016ರ ಜೂನ್ 15ರಂದು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಉಪನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದರು. ಆಸ್ತಿ ವಿವಾದ ಹಿನ್ನೆಲೆಯಲ್ಲಿ ಕೊಲೆ ನಡೆದಿದೆ ಎಂದು ಆರು ಮಂದಿ ವಿರುದ್ಧ ಕೋರ್ಟ್ ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆದರೆ, ಯೋಗೇಶ್ ಗೌಡ ಕುಟುಂಬದ ಸದಸ್ಯರ ಒತ್ತಾಯದ ಮೇರೆಗೆ 2019ರಲ್ಲಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿತ್ತು. ಸಿಬಿಐ ತನಿಖೆಯಲ್ಲಿ ಇದು ರಾಜಕೀಯ ಪ್ರೇರಿತ ಕೊಲೆ ಎಂದು ಗೊತ್ತಾಗಿತ್ತು. ಕೊಲೆಯಲ್ಲಿ ವಿನಯ್ ಕುಲಕರ್ಣಿ ಕೈವಾಡ ಶಂಕೆ ಹಿನ್ನೆಲೆಯಲ್ಲಿ 2020ರ ನವೆಂಬರ್ 5 ರಂದು ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದರು. ವಿನಯ್ ಕುಲಕರ್ಣಿ ಸೇರಿದಂತೆ 21 ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಇತ್ತೀಚೆಗೆ ಸುಪ್ರೀಂಕೋರ್ಟ್ ನಿಂದ ಜಾಮೀನು ಪಡೆದು ವಿನಯ್ ಕುಲಕರ್ಣಿ ಬಿಡುಗಡೆಯಾಗಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular