BREAKING : ನಟ ಜಗ್ಗೇಶ್ ಗೆ ಬಿಗ್ ರಿಲೀಫ್ : ಅರಣ್ಯಾಧಿಕಾರಿಗಳ ನೋಟಿಸ್ ಗೆ ಹೈಕೋರ್ಟ್ ತಡೆ

ಬೆಂಗಳೂರು : ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಜಗ್ಗೇಶ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ನಟ ಜಗ್ಗೇಶ್ ವಿರುದ್ಧದ ಅರಣ್ಯಾಧಿಕಾರಿಗಳ ನೋಟಿಸ್ ಗೆ ಹೈಕೋರ್ಟ್ ತಡೆ ನೀಡಿದೆ.

ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಜಗ್ಗೇಶ್ ಹೈಕೋರ್ಟ್ ಮೊರೆ ಹೋಗಿದ್ದರು. ಅರಣ್ಯಾಧಿಕಾರಿಗಳ ಕ್ರಮ ಪ್ರಶ್ನಿಸಿ ಹೈಕೋರ್ಟ್ ಗೆ ನಟ ಜಗ್ಗೇಶ್ ಅರ್ಜಿ ಸಲ್ಲಿಸಿದ್ದು, ನೋಟಿಸ್ ರದ್ದುಪಡಿಸುವಂತೆ ಮನವಿ ಸಲ್ಲಿಸಿದ್ದರು.. ಅರಣ್ಯಾಧಿಕಾರಿಗಳು ನೀಡಿದ ನೋಟಿಸ್ ಗೆ ಉತ್ತರ ನೀಡುವುದರೊಳಗೆ ಅವರು ನನ್ನ ಮನೆ ಶೋಧ ನಡೆಸಿದ್ದಾರೆ. 14 ಮಂದಿ ನನ್ನ ಮನೆಗೆ ಆಗಮಿಸಿ ನನ್ನ ಮನೆಯಲ್ಲಿದ್ದ ಕೆಲವು ವಸ್ತುಗಳನ್ನು ಚೆಲ್ಲಾಪೆಲ್ಲಿಯಾಗಿ ಮಾಡಿಹೋಗಿದ್ದಾರೆ ಅಂತ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಜಗ್ಗೇಶ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಜಗ್ಗೇಶ್ ವಿರುದ್ಧದ ಅರಣ್ಯಾಧಿಕಾರಿಗಳು ನೀಡಿದ್ದ ನೋಟಿಸ್ ಗೆ ಹೈಕೋರ್ಟ್ ತಡೆ ನೀಡಿದೆ.

ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದ ನಟ

ಕಾನೂನು ದೊಡ್ಡದು ಅಧಿಕಾರಿಗಳು ಕೇಳಿದವಸ್ತು ಒಪ್ಪಿಸಲಾಗಿದೆ! ಅಮ್ಮ ನೀಡಿದ ಬಹಳ ಹಳೆಯ ಲಾಕೆಟ್ ಎಂದು ತಿಳಿಸಿರುವೆ! ಎಷ್ಟೋ ದೋಚುವ ಮನುಷ್ಯರು, ಕೊಲೆ ಪಾತಕರು, ದೇಶದ್ರೋಹಿಗಳು,ಸಮಾಜ ಘಾತಕರಿಗಿಂತ ನನ್ನತಾಯಿ ಕಾಣಿಕೆ ಬಗ್ಗೆ ನೆನ್ನೆಯಿಂದ ತಲೆಕೆಡಿಸಿಕೊಂಡ ದೇವರುಗಳಿಗೆ ಧನ್ಯವಾದ ತಲೆತಗ್ಗಿಸುವ ಯಾವ ಕೆಲಸ ಮಾಡಿಲ್ಲಾ ಮಾಡೋದಿಲ್ಲಾ!ಪಾಚ್ಕೊಳಿ ಎಂದು ನಟ ಜಗ್ಗೇಶ್ ಟ್ವೀಟ್ ಮಾಡಿದ್ದರು.

 

https://twitter.com/Jaggesh2/status/1717187686434517313?ref_src=twsrc%5Etfw%7Ctwcamp%5Etweetembed%7Ctwterm%5E1717187686434517313%7Ctwgr%5E6fe25217f9c38481ce2071bbf3acd77cee886894%7Ctwcon%5Es1_&ref_url=https%3A%2F%2Fkannadadunia.com%2Flive-news%2Ftiger-claw-case-actor-jaggesh-moves-high-court-seeking-cancellation-of-notice%2F

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read