HomeLatest NewsBREAKING : 'ಗೋಲ್ಡ್ ಸ್ಮಗ್ಲಿಂಗ್' ಪ್ರಕರಣದಲ್ಲಿ ನಟಿ ರನ್ಯಾ ರಾವ್ ಗೆ ಬಿಗ್ ರಿಲೀಫ್ :...

BREAKING : ‘ಗೋಲ್ಡ್ ಸ್ಮಗ್ಲಿಂಗ್’ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಗೆ ಬಿಗ್ ರಿಲೀಫ್ : ಜಾಮೀನು ಮಂಜೂರು !

ಸುಮಾರು 102 ಕೋಟಿ ರೂಪಾಯಿ ಮೌಲ್ಯದ ಚಿನ್ನದ ಕಳ್ಳಸಾಗಣೆ ಆರೋಪದ ಮೇಲೆ ಒಂದು ವರ್ಷದಿಂದ ಜೈಲು ವಾಸ ಅನುಭವಿಸುತ್ತಿದ್ದ ಸ್ಯಾಂಡಲ್‌ವುಡ್ ನಟಿ ರನ್ಯಾ ರಾವ್ ಅವರಿಗೆ ಆರ್ಥಿಕ ಅಪರಾಧಗಳ ತಡೆ ನ್ಯಾಯಾಲಯವು ಬುಧವಾರ ಜಾಮೀನು ಮಂಜೂರು ಮಾಡಿದೆ. 2025ರ ಮಾರ್ಚ್ ತಿಂಗಳಿನಲ್ಲಿ ಡಿಆರ್‌ಐ (DRI) ಅಧಿಕಾರಿಗಳಿಂದ ಬಂಧನಕ್ಕೊಳಗಾಗಿದ್ದ ನಟಿಗೆ, ಸುದೀರ್ಘ ಕಾನೂನು ಹೋರಾಟದ ಬಳಿಕ ಕೊನೆಗೂ ದೊಡ್ಡ ಮಟ್ಟದ ರಿಲೀಫ್ ಸಿಕ್ಕಂತಾಗಿದ್ದು, ಇಂದು ಸಂಜೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ.

ಹೌದು.ದುಬೈನಿಂದ ಅಕ್ರಮವಾಗಿ ಸುಮಾರು 14 ಕೆಜಿಗೂ ಅಧಿಕ ಚಿನ್ನ ಸಾಗಾಟ ಮಾಡಿದ ಆರೋಪ ಎದುರಿಸುತ್ತಿದ್ದ ನಟಿ ರನ್ಯಾ ರಾವ್ ಅವರಿಗೆ ಆರ್ಥಿಕ ಅಪರಾಧಗಳ ತಡೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.

102 ಕೋಟಿ ರೂ.ಗೂ ಅಧಿಕ ಮೌಲ್ಯದ ಚಿನ್ನವನ್ನು ಕಳ್ಳಸಾಗಣೆ ಮಾಡಿದ ಆರೋಪದ ಮೇಲೆ 2025ರ ಮಾರ್ಚ್ 3ರಂದು ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ನಟಿ ರನ್ಯಾ ರಾವ್ ಅವರನ್ನು ಬಂಧಿಸಿತ್ತು.ಬಂಧನದ ನಂತರ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರಿಸಲಾಗಿತ್ತು.ಈ ಹಿಂದೆ ಹೈಕೋರ್ಟ್ ಏಕಸದಸ್ಯ ಪೀಠವು ಅವರ ಜಾಮೀನು ಅರ್ಜಿಯನ್ನು ವಜಾ ಮಾಡಿತ್ತು. ಅಲ್ಲದೆ, ಕೇಂದ್ರೀಯ ಆರ್ಥಿಕ ಗುಪ್ತಚರ ಬ್ಯೂರೋ ಕಾಫಿಪೋಸಾ (COFEPOSA) ಕಾಯ್ದೆಯಡಿ ಬಂಧನ ಆದೇಶ ಹೊರಡಿಸಿದ್ದರಿಂದ ಅವರಿಗೆ ಸುಲಭವಾಗಿ ಜಾಮೀನು ಸಿಕ್ಕಿರಲಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಾಮೀನು ಮತ್ತು ಬಿಡುಗಡೆ: ಸುಮಾರು ಒಂದು ವರ್ಷದ ಜೈಲು ವಾಸದ ನಂತರ, ಇದೀಗ ಬುಧವಾರ (ಏಪ್ರಿಲ್ 22, 2026) ಆರ್ಥಿಕ ಅಪರಾಧಗಳ ತಡೆ ನ್ಯಾಯಾಲಯವು ಅವರಿಗೆ ಜಾಮೀನು ನೀಡಿದೆ. ಈ ಹಿನ್ನೆಲೆಯಲ್ಲಿ ಅವರು ಇಂದು ಸಂಜೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ. ಒಂದು ವರ್ಷದ ಸುದೀರ್ಘ ಕಾನೂನು ಹೋರಾಟದ ನಂತರ ನಟಿ ರನ್ಯಾ ರಾವ್ ಅವರಿಗೆ ಈ ಪ್ರಕರಣದಲ್ಲಿ ದೊಡ್ಡ ಮಟ್ಟದ ಸಮಾಧಾನ ಸಿಕ್ಕಂತಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular