ಬೆಂಗಳೂರು : ಧರ್ಮಸ್ಥಳ ಗ್ರಾಮದ ಬುರುಡೆ ಪ್ರಕರಣ ಹಾಗೂ ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಪ್ರಕರಣದ ಆರೋಪಿ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರಿಗೆ ನೀಡಿದ್ದ ಆದೇಶವನ್ನ ಹೈಕೋರ್ಟ್ ರದ್ದುಗೊಳಿಸಿದೆ.
ನ್ಯಾ.ಸೂರಜ್ ಗೋವಿಂದ್ ಅವರಿದ್ದ ಪೀಠ ಆದೇಶ ಹೊರಡಿಸಿದೆ. ಹೊಸದಾಗಿ ವಿಚಾರಣೆ ನಡೆಸಿ ಸೂಕ್ತ ಕಾರಣ, ಸೆಕ್ಷನ್ ಗಳೊಂದಿಗೆ ಆದೇಶ ಹೊರಡಿಸಲು ಪುತ್ತೂರು ಉಪವಿಭಾಗಾಧಿಕಾರಿಗಳಿಗೆ ಕೋರ್ಟ್ ಸೂಚನೆ ನೀಡಿದೆ.
ಸ್ಥಳೀಯ ಆಡಳಿತದ ಗಡಿಪಾರು ಆದೇಶವನ್ನು ಪ್ರಶ್ನಿಸಿ ಹೈಕೋರ್ಟಿಗೆ ಮಹೇಶ್ ಶೆಟ್ಟಿ ಅರ್ಜಿ ಸಲ್ಲಿಸಿದ್ದು, ಗಡಿಪಾರು ಆದೇಶವನ್ನು ರದ್ದುಪಡಿಸುವಂತೆ ಮನವಿ ಮಾಡಿದ್ದರು. ಇದೀಗ ಕೋರ್ಟ್ ಗಡಿಪಾರು ಆದೇಶ ರದ್ದುಮಾಡಿ ಆದೇಶ ಹೊರಡಿಸಿದೆ. ಹೊಸದಾಗಿ ವಿಚಾರಣೆ ನಡೆಸುವಂತೆ ಆದೇಶಿಸಿದೆ.
