ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ ಅಶ್ಲೀಲ ಪದ ಬಳಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ದೂರು ಪ್ರಶ್ನಿಸಿ ಸಿಟಿ ರವಿ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಈ ಪ್ರಕರಣದಲ್ಲಿ ಸಿಟಿ ರವಿಗೆ ಬಿಗ್ ರಿಲೀಫ್ ಸಿಕ್ಕಿದೆ. ಪ್ರಕರಣಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ.
ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಬೆಳಗಾವಿ ಅಧಿವೇಶನದಲ್ಲಿಯೂ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದರು. ವಿಧಾನಸಭೆ ಬಳಿಕ ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸಚಿವರು, ಶಾಸಕರು ಅಂಬೇಡ್ಕರ್ ಭಾವಚಿತ್ರ ಹಿಡಿದು ಪ್ರತಿಭಟನೆ ನಡೆಸಿ, ಅಮಿತ್ ಶಾ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಗಲಾಟೆ ವೇಳೆಯೇ ಬಿಜೆಪಿ ಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆರೋಪ ಮಾಡಿದ್ದು, ನನ್ನ ಬಗ್ಗೆ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂದು ದೂರಿದ್ದರು.
ಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ ನನ್ನ ಬಗ್ಗೆ ಅಶ್ಲೀಲ ಪದ ಬಳಕೆ ಮಾಡಿದ್ದಾರೆ. ಒಂದಲ್ಲ, ಹತ್ತು ಬಾರಿ ಅಶ್ಲೀಲ ಪದ ಬಳಕೆ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಸಿ.ಟಿ.ರವಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ಲಕ್ಷ್ಮೀ ಹೆಬ್ಬಾಳಕರ್ ದೂರು ನೀಡಿದ್ದರು. ನಂತರ ಈ ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು.