HomeKarnatakaBIG NEWS : ‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಬಿಗ್ ರಿಲೀಫ್ ; ಸದ್ಯಕ್ಕಿಲ್ಲ ಟಿಕೆಟ್...

BIG NEWS : ‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಬಿಗ್ ರಿಲೀಫ್ ; ಸದ್ಯಕ್ಕಿಲ್ಲ ಟಿಕೆಟ್ ದರ ಏರಿಕೆ |Namma Metro

ದಿನನಿತ್ಯದ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಬೆಂಗಳೂರಿನ ‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಒಂದು ಸಿಹಿ ಸುದ್ದಿ ಸಿಕ್ಕಿದೆ. ಮೆಟ್ರೋ ಟಿಕೆಟ್ ದರವನ್ನು ಏರಿಕೆ ಮಾಡುವ ಬಿಎಂಆರ್‌ಸಿಎಲ್ (BMRCL) ಪ್ರಸ್ತಾವನೆಗೆ ಬ್ರೇಕ್ ಹಾಕಲಾಗಿದ್ದು, ಸದ್ಯಕ್ಕೆ ದರ ಏರಿಕೆ ಮಾಡದಿರಲು ನಿರ್ಧರಿಸಲಾಗಿದೆ. ಪ್ರಯಾಣಿಕರ ಜೇಬಿಗೆ ಕತ್ತರಿ ಹಾಕುವ ಭೀತಿಯಲ್ಲಿದ್ದವರಿಗೆ ಈ ನಿರ್ಧಾರ ಕೊಂಚ ನಿರಾಳತೆ ನೀಡಿದೆ.

ಬೆಲೆ ಏರಿಕೆಯ ಬಿಸಿಯಲ್ಲಿ ತತ್ತರಿಸಿರುವ ಸಾಮಾನ್ಯ ಜನರಿಗೆ ಬಿಎಂಟಿಸಿ ಮತ್ತು ಮೆಟ್ರೋ ಆಡಳಿತ ಮಂಡಳಿ ಕೊಂಚ ನಿರಾಳದ ಸುದ್ದಿ ನೀಡಿದೆ. ಸದ್ಯಕ್ಕೆ ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ ಮಾಡದಿರಲು ಬಿಎಂಆರ್‌ಸಿಎಲ್ (BMRCL) ನಿರ್ಧರಿಸಿದೆ.

ಹೌದು.   ಬಿಎಂಆರ್‌ಸಿಎಲ್ ಟಿಕೆಟ್ ದರ ಏರಿಕೆ ಮಾಡಲು ಪ್ರಸ್ತಾವನೆ ಸಲ್ಲಿಸಿತ್ತು. ಆದರೆ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಉನ್ನತ ಅಧಿಕಾರಿಗಳು ಸದ್ಯಕ್ಕೆ ದರ ಏರಿಕೆ ಬೇಡ ಎಂದು ನಿರ್ದೇಶನ ನೀಡಿದ್ದಾರೆ.ಬೋರ್ಡ್ ಸಭೆಯಲ್ಲಿ ಈ ವಿಷಯ ಚರ್ಚೆಯಾಗಿದ್ದು, ಸದ್ಯಕ್ಕೆ ಟಿಕೆಟ್ ದರ ಏರಿಕೆಯನ್ನು ಕೈಬಿಡಲಾಗಿದೆ. ಮುಂದಿನ ಸಭೆಯಲ್ಲಿ ಈ ಬಗ್ಗೆ ಮತ್ತೊಮ್ಮೆ ಚರ್ಚೆ ನಡೆಸಲು ನಿರ್ಧರಿಸಲಾಗಿದೆ.ಈಗಾಗಲೇ ನಿತ್ಯದ ಖರ್ಚು-ವೆಚ್ಚಗಳಿಂದ ತೊಂದರೆಗೀಡಾಗಿರುವ ಮೆಟ್ರೋ ಪ್ರಯಾಣಿಕರಿಗೆ, ಸದ್ಯಕ್ಕೆ ಟಿಕೆಟ್ ದರ ಏರಿಕೆ ಬಿಸಿ ತಟ್ಟದಿರುವುದು ಕೊಂಚ ನೆಮ್ಮದಿ ತಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಳೆದ ಫೆಬ್ರವರಿಯಲ್ಲಿ ಟಿಕೆಟ್ ದರ ಏರಿಕೆಗೆ ಪ್ರಯತ್ನ ನಡೆದಾಗ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಇದೀಗ ಮತ್ತೆ ದರ ಏರಿಕೆಯ ಮಾತುಗಳು ಕೇಳಿಬಂದ ಬೆನ್ನಲ್ಲೇ, ಸದ್ಯಕ್ಕೆ ದರ ಏರಿಕೆ ಇಲ್ಲ ಎಂಬ ನಿರ್ಧಾರ ಪ್ರಯಾಣಿಕರ ಪಾಲಿಗೆ ಸಿಹಿ ಸುದ್ದಿಯಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular