ಜೈಲು ಶಿಕ್ಷೆಗೆ ಸುಪ್ರೀಂ ತಡೆ ಬಳಿಕ ರಾಹುಲ್ ಗೆ ಬಿಗ್ ರಿಲೀಫ್; ಸಂಸತ್ ಸದಸ್ಯತ್ವ ಮರಳುವುದರ ಜೊತೆಗೆ ಚುನಾವಣೆಯಲ್ಲಿ ಸ್ಪರ್ಧೆಗೂ ಅವಕಾಶ

ಮೋದಿ ಉಪನಾಮಕ್ಕೆ ಸಂಬಂಧಿಸಿದಂತೆ ಸೂರತ್ ನ್ಯಾಯಾಲಯದಿಂದ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಶುಕ್ರವಾರದಂದು ಬಿಗ್ ರಿಲೀಫ್ ಸಿಕ್ಕಿದ್ದು, ಎರಡು ವರ್ಷಗಳ ಜೈಲು ಶಿಕ್ಷೆಗೆ ಸುಪ್ರೀಂಕೋರ್ಟ್ ನ ತ್ರಿಸದಸ್ಯ ಪೀಠ ತಡೆ ನೀಡಿದೆ.

ಜೈಲು ಶಿಕ್ಷೆಗೆ ಗುರಿಯಾಗಿದ್ದ ಕಾರಣಕ್ಕೆ ತಮ್ಮ ಸಂಸತ್ ಸದಸ್ಯತ್ವವನ್ನು ಕಳೆದುಕೊಂಡಿದ್ದ ರಾಹುಲ್ ಗಾಂಧಿ ಇದನ್ನು ಈಗ ಮರಳಿ ಪಡೆಯಲಿದ್ದು, ಜೊತೆಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಹ ಅವರಿಗೆ ಅವಕಾಶ ಸಿಗಲಿದೆ. ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ ಈಗಾಗಲೇ ಲೋಕಸಭಾ ಸ್ಪೀಕರ್ ಅವರನ್ನು ಭೇಟಿಯಾಗಿ ರಾಹುಲ್ ಗಾಂಧಿಯವರ ಅನರ್ಹತೆ ಆದೇಶ ರದ್ದುಗೊಳಿಸಲು ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಸುಪ್ರೀಂ ಕೋರ್ಟಿನ ಆದೇಶದ ಪ್ರತಿಯನ್ನು ಲೋಕಸಭಾ ಕಾರ್ಯದರ್ಶಿಯವರಿಗೆ ಸಲ್ಲಿಸಬೇಕಾಗಿದ್ದು, ಇದಾದ ಬಳಿಕ ಲೋಕಸಭಾ ಸ್ಪೀಕರ್ ತಮ್ಮ ತೀರ್ಮಾನ ಪ್ರಕಟಿಸಲಿದ್ದಾರೆ ಎನ್ನಲಾಗಿದೆ. ರಾಹುಲ್ ಗಾಂಧಿಯವರಿಗೆ ಲೋಕಸಭಾ ಸದಸ್ಯತ್ವ ಮರಳಿ ಸಿಕ್ಕಿದ ಬಳಿಕ ಮೋದಿ ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಚರ್ಚೆಯಲ್ಲಿ ಭಾಗವಹಿಸಲು ಅವರಿಗೆ ಅವಕಾಶ ಸಿಗಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read