HomeLatest NewsBREAKING : ರಾಹುಲ್ ಗಾಂಧಿಗೆ ಬಿಗ್ ರಿಲೀಫ್ : 'ಮಾನಹಾನಿ ಕೇಸ್' ವಜಾಗೊಳಿಸಿದ ಹೈಕೋರ್ಟ್ !

BREAKING : ರಾಹುಲ್ ಗಾಂಧಿಗೆ ಬಿಗ್ ರಿಲೀಫ್ : ‘ಮಾನಹಾನಿ ಕೇಸ್’ ವಜಾಗೊಳಿಸಿದ ಹೈಕೋರ್ಟ್ !

ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡಿದ ಆರೋಪದಡಿ ದಾಖಲಾಗಿದ್ದ ಮಾನಹಾನಿ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ನಾಟಕ ಹೈಕೋರ್ಟ್ ರಿಲೀಫ್ ನೀಡಿದೆ.

ಕಳೆದ ಕರ್ನಾಟಕ ವಿಧಾನಸಭಾ ಚುನಾವಣೆಯ ವೇಳೆ ಕಾಂಗ್ರೆಸ್ ಪಕ್ಷವು ಅಂದಿನ ಬಿಜೆಪಿ ಸರ್ಕಾರದ ವಿರುದ್ಧ ‘ಕರಪ್ಷನ್ ರೇಟ್ ಕಾರ್ಡ್’ (ಭ್ರಷ್ಟಾಚಾರದ ದರಪಟ್ಟಿ) ಎಂಬ ಜಾಹೀರಾತನ್ನು ಬಿಡುಗಡೆ ಮಾಡಿತ್ತು. ಈ ಜಾಹೀರಾತನ್ನು ರಾಹುಲ್ ಗಾಂಧಿ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು.ಈ ಜಾಹೀರಾತು ಬಿಜೆಪಿಯ ವರ್ಚಸ್ಸಿಗೆ ಧಕ್ಕೆ ತಂದಿದೆ ಎಂದು ಆರೋಪಿಸಿ ಬಿಜೆಪಿ ಪರವಾಗಿ ಕೇಶವಪ್ರಸಾದ್ ಎಂಬುವವರು ರಾಹುಲ್ ಗಾಂಧಿ ವಿರುದ್ಧ ಖಾಸಗಿ ದೂರು ದಾಖಲಿಸಿದ್ದರು.

ಈ ದೂರಿನ ಅನ್ವಯ ಕೆಳಹಂತದ ನ್ಯಾಯಾಲಯ ರಾಹುಲ್ ಗಾಂಧಿಗೆ ಸಮನ್ಸ್ ನೀಡಿತ್ತು. ಇದನ್ನು ಪ್ರಶ್ನಿಸಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಪೀಠವು, ದಾಖಲೆಗಳು ಮತ್ತು ಪ್ರಕರಣದ ಸ್ವರೂಪವನ್ನು ಪರಿಶೀಲಿಸಿ ರಾಹುಲ್ ಗಾಂಧಿ ವಿರುದ್ಧದ ಖಾಸಗಿ ದೂರನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.ಈ ಮೂಲಕ ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಈ ಕಾನೂನು ಹೋರಾಟದಲ್ಲಿ ರಾಹುಲ್ ಗಾಂಧಿ ಅವರಿಗೆ ಜಯ ಸಿಕ್ಕಂತಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular