HomeIndiaBIG BREAKING : 'ರಾಹುಲ್ ಗಾಂಧಿ'ಗೆ ಬಿಗ್ ರಿಲೀಫ್ : 2 ವರ್ಷ ಜೈಲು ಶಿಕ್ಷೆಗೆ...

BIG BREAKING : ‘ರಾಹುಲ್ ಗಾಂಧಿ’ಗೆ ಬಿಗ್ ರಿಲೀಫ್ : 2 ವರ್ಷ ಜೈಲು ಶಿಕ್ಷೆಗೆ ಸುಪ್ರೀಂಕೋರ್ಟ್ ತಡೆ

ನವದೆಹಲಿ : ಪ್ರಧಾನಿ ಮೋದಿ ಉಪನಾಮ ಕುರಿತಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ಸಿಕ್ಕಿದ್ದು, 2 ವರ್ಷ ಜೈಲು ಶಿಕ್ಷೆಗೆ ಸುಪ್ರೀಂಕೋರ್ಟ್ ತಡೆ ನೀಡಿದೆ.

ಪ್ರಧಾನಿ ಮೋದಿ ಉಪನಾಮ ಕುರಿತಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆ ಸಂಕಷ್ಟವನ್ನುಂಟು ಮಾಡಿತ್ತು. ಸೂರತ್ ಶಾಸಕ ಪೂರ್ಣೇಶ್ ಮೋದಿ ದಾಖಲಿಸಿದ್ದ ಪ್ರಕರಣದಲ್ಲಿ ಸೂರತ್ ನ್ಯಾಯಾಲಯ ರಾಹುಲ್ ಗಾಂಧಿಯವರಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದು, ಈ ಕಾರಣಕ್ಕಾಗಿ ಅವರು ಸಂಸತ್ ಸದಸ್ಯ ಸ್ಥಾನವನ್ನು ಕಳೆದುಕೊಂಡಿದ್ದರು ಈ ಪ್ರಕರಣದಲ್ಲಿ ಸೆಷನ್ಸ್ ನ್ಯಾಯಾಲಯ ನೀಡಿದ್ದ ತೀರ್ಪಿಗೆ ತಡೆ ನೀಡಲು ಗುಜರಾತ್ ಹೈಕೋರ್ಟ್ ನಿರಾಕರಿಸಿತ್ತು, ನಂತರ ರಾಹುಲ್ ಗಾಂಧಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.

ಪ್ರಧಾನಿ ಮೋದಿ ವಿರುದ್ಧ ಹೇಳಿಕೆ ನೀಡಿದ ಹಿನ್ನೆಲೆ ಮಾನಹಾನಿ ಪ್ರಕರಣದಲ್ಲಿ ಎರಡು ವರ್ಷ ಜೈಲು ಶಿಕ್ಷೆಗೆ ಒಳಗಾಗಿ ಸಂಸದ ಸ್ಥಾನದಿಂದ ಅನರ್ಹಗೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಗುಜರಾತ್ ಹೈಕೋರ್ಟ್ ನಲ್ಲಿ ಹಿನ್ನಡೆಯಾಗಿದ್ದು, ನಂತರ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಜುಲೈ 21 ರಂದು ಸುಪ್ರೀಂಕೋರ್ಟ್ ನಲ್ಲಿ ರಾಹುಲ್ ಗಾಂಧಿ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿ ನಂತರ ವಿಚಾರಣೆಯನ್ನು ಆಗಸ್ಟ್ 4 ಕ್ಕೆ ಮುಂದೂಡಿತ್ತು. ಕರ್ನಾಟಕದಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಮೋದಿ ಹೆಸರಿನವರೆಲ್ಲ ಮೋಸಗಾರರೇ ಆಗಿರುತ್ತಾರಲ್ಲ ಏಕೆ ಎಂದು ರಾಹುಲ್ ಪ್ರಶ್ನಿಸಿದ್ದರು. ಈ ಹಿನ್ನೆಲೆಯಲ್ಲಿ ಗುಜರಾತ್ ಶಾಸಕ ಪೂರ್ಣೇಶ್ ಮೋದಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular