ಜನಸಾಮಾನ್ಯರಿಗೆ ಬಿಗ್ ಶಾಕ್ : ಕೆಜಿಗೆ 400 ರೂ. ತಲುಪಿದ ʻಬೆಳ್ಳುಳ್ಳಿʼ ಬೆಲೆ

ಬೆಂಗಳೂರು : ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಇದೀಗ ಬೆಳ್ಳುಳ್ಳಿ ದರವು ಕೆಜಿಗೆ 400 ರೂ. ತಲುಪಿದೆ.

ಹೌದು, ರಾಜ್ಯದಲ್ಲಿ ಕೆಜಿ ಬೆಳ್ಳಳ್ಳಿ ಬೆಲೆಯು 400 ರೂ.ಗೆ ತಲುಪಿದ್ದು, ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್‌ ಎದುರಾಗಿದೆ. ಸದ್ಯಕ್ಕೆ ಬೆಳ್ಳುಳ್ಳಿ ಬೆಲೆ ಕಡಿಮೆಯಾಗುವ ಲಕ್ಷಣಗಳು ಕಾಣುತ್ತಿಲ್ಲ. ಮುಂದಿನ ಫೆಬ್ರವರಿವರೆಗೂ ಬೆಳ್ಳುಳ್ಳಿ ದರ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.

ಕಳೆದ ಎರಡು ತಿಂಗಳಿಣಿಂದ ಏರುಗತಿಯಲ್ಲೇ ಇರುವ ಬೆಳ್ಳುಳ್ಳಿ ದರ ಇದೀಗ ಒಂದು ಕೆಜಿಗೆ 400 ರೂ. ಮುಟ್ಟಿದೆ. ಟೊಮೆಟೊ, ಈರುಳ್ಳಿ ಬೆಲೆ ನಿಯಂತ್ರಣಕ್ಕೆ ಬಂದ ಬೆನ್ನಲ್ಲೇ ಬೆಳ್ಳುಳ್ಳಿ ಬೆಲೆಯಲ್ಲಿ ಏರಿಕೆಯಾಗಿರುವುದು ಜನಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ.

ಮುಂಗಾರು ಹಂಗಾಮಿನಲ್ಲಿ ಸರಿಯಾಗಿ ಮಳೆಯಾಗದ ಕಾರಣ ಮಾರುಕಟ್ಟೆ ಬೇಡಿಕೆಗೆ ಅಗತ್ಯದಷ್ಟು ಬೆಳ್ಳುಳ್ಳಿ ಬಂದಿಲ್ಲ. ಅತಿವೃಷ್ಟಿ ಮತ್ತು ಅನಾವೃಷ್ಟಿ ಎರಡರಿಂದಲೂ ಬೆಳ್ಳುಳ್ಳಿ ಬೆಳೆ ನಾಶವಾಗಿರುವುದರಿಂದ ಸಹಜವಾಗಿಯೇ ಬೆಳ್ಳುಳ್ಳಿ ಬೆಲೆ ಏರಿಕೆಗೆ ಕಾರಣ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read