ಬೆಂಗಳೂರು: ರಾಜ್ಯ ವಿಧಾನಪರಿಷತ್ ಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳಿಗೆ ದೇಣಿಗೆ ಕಡ್ಡಾಯಗೊಳಿಸಿದೆ.
ರಾಜ್ಯ ವಿಧಾನ ಪರಿಷತ್ ನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಂದ ತಲಾ ಎರಡು ಸ್ಥಾನಗಳಿಗೆ 2026ರ ನವೆಂಬರ್ ನಲ್ಲಿ ನಡೆಯುವ ಚುನಾವಣೆಗೆ ಆಡಳಿತಾರೂಢ ಕಾಂಗ್ರೆಸ್ ಪಕ್ಷದಿಂದ ತಯಾರಿ ಆರಂಭಿಸಲಾಗಿದೆ. ಪಕ್ಷದ ಅಭ್ಯರ್ಥಿಗಳಾಗಲು ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕಾಂಗ್ರೆಸ್ ನಿಂದ ಅಭ್ಯರ್ಥಿಗಳಾಗಲು ಆಸಕ್ತಿ ಹೊಂದಿದವರು ಒಂದು ಲಕ್ಷ ರೂಪಾಯಿ ದೇಣಿಗೆ ಮೊತ್ತದ ಡಿಡಿಯೊಂದಿಗೆ ಅರ್ಜಿ ಸಲ್ಲಿಸಲು ನವೆಂಬರ್ 1ರವರೆಗೆ ಕಾಲಾವಕಾಶ ನೀಡಲಾಗಿದೆ.