ಬೆಂಗಳೂರು : ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ ಎದುರಾಗಿದ್ದು, ಮೈಸೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಳ್ಳಂಬೆಳಗ್ಗೆ ಮೈಸೂರು ಸೇರಿ ರಾಜ್ಯದ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಮೈಸೂರಿನಲ್ಲಿ ಪಾಲಿಕೆ ಉಪವಿಭಾಗಾಧಿಕಾರಿ ಮನೆ ಮೇಲೆ ದಾಳಿ ನಡೆಸಲಾಗಿದೆ.
ಮೈಸೂರಿನ ಸಿದ್ಧಾರ್ಥ್ ಬಡಾವಣೆಯಲ್ಲಿರುವ ಪಾಲಿಕೆ ಉಪ ವಿಭಾಗಧಿಕಾರಿ ವೆಂಕಟರಾಮ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಸಾತಗಳ್ಳಿಯ ಜೆಪಿ ನಗರದಲ್ಲಿರುವ ಕೌಶಲ್ಯಾಭಿವೃದ್ಧಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ್ ಸ್ವಾಮಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
You Might Also Like
TAGGED:ಲೋಕಾಯುಕ್ತ ದಾಳಿ.