ಬೆಂಗಳೂರು : ಕ್ರಿಕೆಟ್ ಪ್ರೇಮಿಗಳಿಗೆ ಬಿಗ್ ಶಾಕ್ ಎಂಬಂತೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಾಳಿನ ಪಂದ್ಯಕ್ಕೆ ಅವಕಾಶ ಇಲ್ಲ ಎಂಬುದಾಗಿ ತಿಳಿದು ಬಂದಿದೆ.
ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ನಾಳೆ ಮ್ಯಾಚ್ ನಡೆಸಲು ಅನುಮತಿ ನಿರಾಕರಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಹೇಳಿದ್ದಾರೆ.
ಸೂಕ್ತ ರೀತಿಯಲ್ಲಿ ಕ್ರೀಡಾಂಗಣ ಸಿದ್ದಪಡಿಸಿದ ಬಳಿಕವೇ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಕಾಲ್ತುಳಿತ ದುರಂತ ನಡೆದ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಾಳೆ, ಡಿಸೆಂಬರ್ 24, 2025 ರಂದು ವಿಜಯ್ ಹಜಾರೆ ಟ್ರೋಫಿ ಕ್ರಿಕೆಟ್ ಪಂದ್ಯ ನಡೆಸಲು ಅನುಮತಿ ಕೋರಲಾಗಿತ್ತು. ಪ್ರೇಕ್ಷಕರಿಲ್ಲದೇ ಪಂದ್ಯ ನಡೆಸಲಾದರೂ ಅನುಮತಿ ಕೊಡಿ ಎಂದು ಕೇಳಲಾಗಿತ್ತು. ಆದರೆ ಯಾವುದಕ್ಕೂ ಅವಕಾಶ ನೀಡದೇ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಪಂದ್ಯ ನಡೆಸಲು ಅನುಮತಿ ನಿರಾಕರಿಸಲಾಗಿದೆ. ಭದ್ರತಾ ಕಾರಣಗಳಿಂದಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

