ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಬಿಗ್ ಶಾಕ್: 2.13 ಲಕ್ಷ ಮಂದಿ ಖಾತೆಗೆ ಹಣ ಹಾಕಲ್ಲ…!

ಕರ್ನಾಟಕ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ “ಗೃಹಲಕ್ಷ್ಮಿ”ಯೋಜಯು ಒಂದಾಗಿದ್ದು, ದಿನಾಂಕ:-06-06-2023ರ ಆದೇಶ ಹಾಗೂ ದಿನಾಂಕ:-17-07-2023ರ ಮಾರ್ಗಸೂಚಿ ಯಂತೆ ಅನುಷ್ಠಾನಗೊಳಿಸಲಾಗುತ್ತಿದೆ.

ದಿನಾಂಕ:-17-07-2023 ರಂದು ಹೊರಡಿಸಿದ ಮಾರ್ಗಸೂಚಿ ಅನ್ವಯ ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದಲ್ಲಿ ಹಾಗೂ ಜಿ.ಎಸ್.ಟಿ. ರಿಟರ್ನ್ಸ್ ಸಲ್ಲಿಸುವವರಾಗಿದ್ದಲ್ಲಿ ಯೋಜನೆಗೆ ಅರ್ಹರಿರುವುದಿಲ್ಲ.

ಈವರೆಗೆ ರಾಜ್ಯಾದ್ಯಂತ ಗೃಹಲಕ್ಷ್ಮಿ ಯೋಜನೆಯಡಿ 2.13 ಲಕ್ಷ ಫಲಾನುಭವಿಗಳು ಐಟಿ/ಜಿಎಸ್‍ಟಿ ವ್ಯಾಪ್ತಿಗೊಳಪಡುತ್ತಾರೆ ಎಂದು ತಿಳಿದು ಬಂದಿರುತ್ತದೆ. ದಿನಾಂಕ: 15-07-2025ರ ಎಂಪಿಐಸಿ ಸಭೆಯಲ್ಲಿ ಐಟಿ/ಜಿಎಸ್‍ಟಿ ಟ್ಯಾಕ್ಸ್ ಪೇಯಿ ಎಂದು ಸ್ಟೆಟಸ್ ತೋರಿಸುತ್ತಿರುವ ಫಲಾನುಭವಿಗಳು ಐಟಿ/ಜಿಎಸ್‍ಟಿ ಟ್ಯಾಕ್ಸ್ ಪೇಯಿಗೆ ಒಳಪಡುವುದರಿಂದ ಅರ್ಜಿ ಪರಿಗಣಿಸಲು ಬರುವುದಿಲ್ಲ. 

ಇನ್ನು ಮುಂದೆ ಗೃಹಲಕ್ಷ್ಮಿ ಯೋಜನೆಯಡಿ ಐಟಿ/ಜಿಎಸ್‍ಟಿ ಟ್ಯಾಕ್ಸ್ ಪೇಯಿ ಎಂದು ಸ್ಟೆಟಸ್ ತೋರಿಸುತ್ತಿರುವ ಫಲಾನುಭವಿಗಳ ಧನಸಹಾಯ ಪಾವತಿಗಾಗಿ ಮನವಿ ಸಲ್ಲಿಸಿದಲ್ಲಿ ಐಟಿ/ಜಿಎಸ್‍ಟಿ ಟ್ಯಾಕ್ಸ್ ಪೇಯಿಗಳಾಗಿರುವುದರಿಂದ ಅರ್ಜಿಯನ್ನು ಪರಿಗಣಿಸುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಸೋಮವಾರಪೇಟೆ ಇವರ ಹಂತದಲ್ಲಿ ಹಿಂಬರಹ ನೀಡುವಂತೆ ಸೂಚಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read