ಹೋಟೆಲ್ ಗ್ರಾಹಕರಿಗೆ ಬಿಗ್ ಶಾಕ್ : ಶೀಘ್ರವೇ ಊಟ, ತಿಂಡಿ ಬೆಲೆಯೂ ಹೆಚ್ಚಳ!

ಬೆಂಗಳೂರು : ಸತತ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಮತ್ತೊಂದು ಶಾಕ್, ಹಾಲಿನ ದರ ಬೆಲೆ ಹೆಚ್ಚಳದ ಬೆನ್ನಲ್ಲೇ ಹೋಟೆಲ್ ಊಟ, ತಿಂಡಿ ದರ ಹೆಚ್ಚಳಕ್ಕೆ ಹೋಟೆಲ್ ಮಾಲೀಕರು ಚಿಂತನೆ ನಡೆಸಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ವಿದ್ಯುತ್, ತರಕಾರಿ, ಅಕ್ಕಿ, ಬೇಳೆ ಕಾಳುಗಳ ಬೆಲೆಗಳು ಗಗನಕ್ಕೇರಿದ್ದು, ಹೊಟೇಲ್ ಉದ್ಯಮವನ್ನ ಸಂಕಷ್ಟಕ್ಕೆ ದೂಡಿದೆ ಇದರ ಜೊತೆ ವಿದ್ಯುತ್, ಹಾಲಿನ ದರ ಏರಿಕೆ ಬರೆ ಮಾಲೀಕರನ್ನ ಕಂಗೆಡಿಸಿದೆ.ಹೀಗಾಗಿ ನಷ್ಟ ಸರಿದೂಗಿಸಲು ಅನಿವಾರ್ಯವಾಗಿ ಆಗಸ್ಟ್ 1 ರಿಂದ ಹೋಟೆಲ್ ಊಟ, ತಿಂಡಿ, ಟೀ,ಕಾಫಿ ಬೆಲೆಯಲ್ಲಿ ಏರಿಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಯಾವ ತಿಂಡಿ ಎಷ್ಟು ಏರಿಕೆ?

ಅನ್ನ ಸಾಂಬಾರ್ – 30 ರೂ.ಇದ್ದದ್ದು, 40ರೂ.ವರೆಗೆ ಏರಿಕೆ ಮಾಡುವ ಸಾಧ್ಯತೆ ಇದ್ದು, ಫುಲ್ ಊಟ 50 ರೂ. ಇದ್ದದ್ದು 70 ರೂ.ವರೆಗೆ ಏರಿಕೆ ಮಾಡಲು ಹೋಟೆಲ್ ಮಾಲೀಕರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

ಮಸಾಲೆ ದೋಸೆ- 60 ರೂ, ಉದ್ದಿನವಡೆ 12- 15 ರೂ, ಪೂರಿ 45-50 ರೂ, ಪೂಳಿಯೊಗರೆ 40-50 ರೂ.ವರೆಗೆ, ಇಡ್ಲಿ ವಡೆ 30-50 ರೂ.ವರೆಗೆ, ಬಿಸಿ ಬೇಳೆಬಾತ್ 35- 40ರೂ, ರೈಸ್ ಬಾತ್ 35-40 ರೂ.ಟೀ, ಕಾಫಿ 12- 15ರೂ. ವರೆಗೆ ಏರಿಕೆ ಮಾಡಲು ಹೋಟೆಲ್ ಮಾಲೀಕರು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read