ಬೆಂಗಳೂರು : ಗೃಹಲಕ್ಷ್ಮಿ ಯೋಜನೆಯಡಿ ಹಣ ತಿಂಗಳಿಗೊಮ್ಮೆ ಬಿಡುಗಡೆಯಾಗಬೇಕಾಗಿದ್ದರೂ, ಕೆಲವೊಮ್ಮೆ ತಾಂತ್ರಿಕ ಕಾರಣಗಳಿಂದಾಗಿ ಒಂದೇ ಬಾರಿ ಎರಡು ಅಥವಾ ಮೂರು ತಿಂಗಳ ಹಣವೂ ಜಮಾ ಆಗುತ್ತಿದೆ. ಇದೀಗ ಈ ಕುರಿತು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು 3 ತಿಂಗಳಿಗೊಮ್ಮೆ ಸರ್ಕಾರದ ಗ್ಯಾರಂಟಿ ಯೋಜನೆಯಾದ ಗೃಹಲಕ್ಷ್ಮಿ ಹಣವನ್ನ ನೀಡುತ್ತೇಬೆ ಎಂದು ಹೇಳಿದ್ದಾರೆ.
ನಾವು ಆರ್ಥಿಕವಾಗಿ ಗಟ್ಟಿಯಾಗಿ ಇದ್ದೇವೆ, ಜಿಎಸ್ ಟಿ ಕಲೆಕ್ಷನ್ ಆದರೆ ಕೇಂದ್ರದವರು ಅರ್ಧ ಹಣ ಕೊಡಬೇಕು, ಅವರು ಕೊಡುವುದು ತಡವಾಗುತ್ತದೆ. ಆದ್ದರಿಂದ ಹಣ ಹೊಂದಿಸುವುದು ತಡವಾಗುತ್ತದೆ. 3 ತಿಂಗಳಿಗೊಮ್ಮೆ ಗೃಹಲಕ್ಷ್ಮಿ ಹಣ ನೀಡುತ್ತೇವೆ ಎಂದರು.
ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದೇನು..?
ಯೋಜನೆ ಆರಂಭವಾದಗಿನಿಂದ ಯೋಜನೆಯಡಿ 1.24 ಕೋಟಿ ಮಹಿಳೆಯರಿಗೆ ರೂ.54,000 ಕೋಟಿ ಗೃಹಲಕ್ಷ್ಮಿ ಹಣ ಸಂದಾಯವಾಗಿದೆ. ಒಟ್ಟು 23 ಕಂತುಗಳಲ್ಲಿ ನೊಂದಣಿಯಾದ ಪ್ರತಿ ಕುಟುಂಬದ ಯಜಮಾನಿಗೆ ತಲಾ ರೂ.46,000 ಲಭಿಸಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಈ ಹಿಂದೆ ಇಲಾಖೆಯಿಂದಲೇ ಫಲಾನುಭವಿಗಳ ಖಾತೆ ರೂ.2000 ಹಣ ಜಮೆ ಮಾಡಲಾಗುತ್ತಿತ್ತು. ಸದ್ಯ ತಾಲ್ಲೂಕು ಪಂಚಾಯಿತಿಗಳಿಂದ ಫಲಾನುಭವಿಗಳ ಖಾತೆ ಹಣ ಜಮೆ ಮಾಡಲು ಬದಲಾವಣೆ ಮಾಡಿದ್ದರಿಂದ ಕೆಲ ತಿಂಗಳ ಕಂತು ಪಾವತಿಯಾಗುವಲ್ಲಿ ವಿಳಂಬವಾಗಿದೆ ಎಂದರು.
