ಬಿಪಿಎಲ್ ಕಾರ್ಡ್ ಹೊಂದಿದ ಅನರ್ಹರಿಗೆ ಬಿಗ್ ಶಾಕ್: ರಾಜ್ಯದಲ್ಲಿ 3.65 ಲಕ್ಷ ಕಾರ್ಡ್ ರದ್ದು: ಅರ್ಹರಿಗೆ ಕೂಡಲೇ ಬಿಪಿಎಲ್ ಕಾರ್ಡ್ ನೀಡಲು ಸಿಎಂ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಅನರ್ಹರಿಗೆ ನೀಡಿದ ಬಿಪಿಎಲ್ ಕಾರ್ಡ್ ಗಳ ಪೈಕಿ 3.65 ಲಕ್ಷ ಪಡಿತರ ಚೀಟಿಗಳನ್ನು ಪತ್ತೆ ಮಾಡಿ ರದ್ದು ಮಾಡಲಾಗಿದೆ. ಇನ್ನೂ ಅನೇಕ ಅನರ್ಹರು ಬಿಪಿಎಲ್ ಕಾರ್ಡ್ ಗಳನ್ನು ಪಡೆದುಕೊಂಡಿದ್ದು, ಅವುಗಳನ್ನು ಪತ್ತೆ ಹಚ್ಚಿ ರದ್ದು ಮಾಡುವಂತೆ ಸಿಎಂ ಸಿದ್ದರಾಮಯ್ಯ ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಆಹಾರ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದ ಸಿಎಂ, ಅನರ್ಹರ ಪತ್ತೆ ಕಾರ್ಯಾಚರಣೆಯ ಸಂದರ್ಭದಲ್ಲಿ ಅರ್ಹರಿಗೆ ಯಾವುದೇ ತೊಂದರೆ ಆಗಬಾರದು. ಒಬ್ಬ ಅರ್ಹ ವ್ಯಕ್ತಿಯ ಬಿಪಿಎಲ್ ಕಾರ್ಡ್ ಕೂಡ ರದ್ದಾಗಬಾರದು. ಅರ್ಹರಿಗೆ ಇದುವರೆಗೆ ಬಿಪಿಎಲ್ ಕಾರ್ಡ್ ನೀಡದಿದ್ದರೆ ಕೂಡಲೇ ಬಿಪಿಎಲ್ ಕಾರ್ಡ್ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ.

ಪಡಿತರ ವಿತರಣೆ ವ್ಯವಸ್ಥೆಯಲ್ಲಿ ಪಾರದರ್ಶಕತೆ ಇರಬೇಕು. ಆಹಾರ ಧಾನ್ಯಗಳನ್ನು ಸರಬರಾಜು ಮಾಡುವ ವಾಹನಗಳಿಗೆ ಜಿಪಿಎಸ್ ಟ್ರ್ಯಾಕರ್ ಅಳವಡಿಸಬೇಕು. ಎಲ್ಲಾ ಗೋದಾಮಗಳಲ್ಲಿ ಸಿಸಿಟಿವಿ ಕ್ಯಾಮೆರಾ ಹಾಕಬೇಕು ಎಂದು ಸಿಎಂ ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read