BPL ಕಾರ್ಡ್‌ ಹೊಂದಿರುವ ಅನರ್ಹರಿಗೆ ಬಿಗ್‌ ಶಾಕ್‌ : ಗ್ರಾಮ ಮಟ್ಟದಲ್ಲಿ ಪರಿಶೀಲನೆಗೆ ಸಮಿತಿ ರಚನೆ

ಅನರ್ಹ ಬಿಪಿಎಲ್ ಕಾರ್ಡ್ ಫಲಾನುಭವಿಗಳನ್ನು ಪತ್ತೆ ಹಚ್ಚಿ, ಅವರಿಗೆ ಸಿಗುತ್ತಿರುವ ಸೌಲಭ್ಯವನ್ನು ಅರ್ಹರಿಗೆ ದೊರಕಿಸಿಕೊಡುವ ಸದುದ್ದೇಶದಿಂದ ಗ್ರಾಮ ಮಟ್ಟದಲ್ಲಿ ಸಮಿತಿಯನ್ನು ರಚಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಕೆ.ಹೆಚ್. ಮುನಿಯಪ್ಪ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.

ಅನರ್ಹ ಬಿಪಿಎಲ್ ಕಾರ್ಡ್‌ದಾರರಿಂದ ಅರ್ಹರಿಗೆ ಅನ್ಯಾಯವಾಗುತ್ತಿದೆ. ಹೀಗಾಗಿ, ಅನರ್ಹ ಫಲಾನುಭವಿಗಳನ್ನು ಪತ್ತೆ ಹಚ್ಚಿ, ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಿ, ಅರ್ಹರಿಗೆ ಸೌಲಭ್ಯ ಕಲ್ಪಿಸಲು ಗ್ರಾಮ ಮಟ್ಟದಲ್ಲಿ ಸಮಿತಿ ರಚಿಸಲಾಗುವುದು. ಈ ಸಮಿತಿಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು, ಗ್ರಾಮ ಲೆಕ್ಕಾಧಿಕಾರಿ, ಗ್ರಾಮ ಸಹಾಯಕರು, ಮತ್ತು ಸ್ಥಳೀಯ ನಾಗರಿಕರು ಇರಲಿದ್ದಾರೆ.

ಸಮಿತಿಯು ಗ್ರಾಮದ ಪ್ರತಿ ಮನೆಗೆ ಭೇಟಿ ನೀಡಿ, ಬಿಪಿಎಲ್ ಕಾರ್ಡ್‌ದಾರರ ಆರ್ಥಿಕ ಸ್ಥಿತಿಗತಿ ಪರಿಶೀಲನೆ ಮಾಡುತ್ತದೆ. ಅನರ್ಹರೆಂದು ಕಂಡುಬಂದಲ್ಲಿ, ಅವರ ಬಿಪಿಎಲ್ ಕಾರ್ಡ್ ರದ್ದುಪಡಿಸಿ, ಅರ್ಹರಿಗೆ ಹೊಸ ಕಾರ್ಡ್ ವಿತರಿಸಲಾಗುತ್ತದೆ.

ಈ ಕ್ರಮದಿಂದ ಅರ್ಹರಿಗೆ ಬಿಪಿಎಲ್ ಸೌಲಭ್ಯಗಳು ದೊರೆಯಲಿದ್ದು, ಅನರ್ಹರಿಗೆ ಸಿಗುತ್ತಿರುವ ಸೌಲಭ್ಯವನ್ನು ತಡೆಯಬಹುದಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read